ಹಂತಕರು, ಹಂತಕರಿಗೆ ಸಹಕಾರ ನೀಡಿದವರ ಆಸ್ತಿಗಳ ಮುಟ್ಟುಗೋಲು – ADGP ಅಲೋಕ್ ಕುಮಾರ್

ಬಿಜೆಪಿ ( bjp ) ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಯ ಆರೋಪಿಗಳಿಗೆ ಪಿಎಫ್ಐ ಮತ್ತು ಎಸ್ಡಿಪಿಐ ಜೊತೆ ಸಂಬಂಧ ಇರುವುದು ಗೊತ್ತಾಗಿದೆ. ಹತ್ಯೆಯ ಬಳಿಕ ಆರೋಪಿಗಳು ಕಾಸರಗೋಡು ಮಸೀದಿಗೆ ಹೋಗಿದ್ದರು ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.


ಹತ್ಯೆಯಲ್ಲಿ ನೇರವಾಗಿ ಭಾಗಿಯಾಗಿ ಹಲ್ಲೆ ನಡೆಸಿದ ಮೂವರು ಆರೋಪಿಗಳನ್ನು ಇಂದು ಬೆಳಗ್ಗೆ ಮಂಗಳೂರಿನ ತಲಪಾಡಿ ಚೆಕ್ ಪೋಸ್ಟ್ ಬಳಿ ಬಂಧಿಸಲಾಗಿದೆ. ಸುಳ್ಯದ ಶಿಯಾಬ್ (33), ಅಂಕತಡ್ಕದ ರಿಯಾಝ್ (27) ಸುಳ್ಯದ ಎಲಿಮಲೆ ನಿವಾಸಿ ಬಶೀರ್ನನ್ನು ಬಂಧಿಸಿದ್ದೇವೆ. ಶಿಯಾಬ್ ಕ್ಯಾಂಪ್ಕೋ ಕಂಪನಿಗೆ ಕೊಕ್ಕೊ ವಿತರಣೆ ಮಾಡುತ್ತಿದ್ದರೆ ರಿಯಾಝ್ ಕೋಳಿ ವ್ಯಾಪಾರ ಮಾಡುತ್ತಿದ್ದ. ಬಶೀರ್ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದ. ಕೃತ್ಯಕ್ಕೆ ಬ್ಲ್ಯಾಕ್ ಸ್ಪ್ಲೆಂಡರ್ ಬೈಕನ್ನು ಬಳಕೆ ಮಾಡಲಾಗಿದೆ. ಇದನ್ನೂ ಓದಿ : –  ಆಗಸ್ಟ್ 15ರಂದು ವೊಲ್ವೊ ಸೇರಿ ಎಲ್ಲಾ ಬಿಎಂಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ

ಕಾರೊಂದನ್ನು ಸಹ ಬಳಕೆ ಮಾಡಿದ್ದಾರೆ. ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ಸಹ ವಶಪಡಿಸಿಕೊಳ್ಳಲಾಗುವುದು ಎಂದು ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ. ವಾರೆಂಟ್ ಇಶ್ಯೂ ಮಾಡಿ ಹಂತಕರು ಮತ್ತು ಹಂತಕರಿಗೆ ಸಹಕಾರ ನೀಡಿದವರ ಆಸ್ತಿಗಳನ್ನು ಮುಟ್ಟುಗೋಲು ಹಾಕುತ್ತೇವೆ. ಯಾವುದೇ ಅಮಾಯಕರನ್ನು ಬಂಧನ ಮಾಡುವುದಿಲ್ಲ. ಆದರೆ ಕೃತ್ಯದಲ್ಲಿ ಭಾಗಿಯಾದವರೆಲ್ಲರನ್ನು ಬಂಧಿಸುತ್ತೇವೆ. ಯಾರನ್ನು ಫಿಕ್ಸ್ ಮಾಡುವುದಕ್ಕೆ ಹೋಗುವುದಿಲ್ಲ. ಯಾರನ್ನೋ ಬಂಧಿಸುವುದಕ್ಕೆ ಇದು ಹುಡುಗಾಟವಲ್ಲ. ನಮಗೆ ಜಾತಿ, ಧರ್ಮ, ಬಣ್ಣ ಇಲ್ಲ ಎಂದು ಅಲೋಕ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : –  ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಯೋಜನೆ ಬಗ್ಗೆ ಕಾಂಗ್ರೆಸ್ ವ್ಯಂಗ್ಯ ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಯೋಜನೆ ಬಗ್ಗೆ ಕಾಂಗ್ರೆಸ್ ವ್ಯಂಗ್ಯ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!