ಚಿಕ್ಕಬಳ್ಳಾಪುರದ (Chikkaballapura) ಮಂಚೇನಹಳ್ಳಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪ್ರಕಾಶ್ (Prakash) ಅರೆಸ್ಟ್ ಖಂಡಿಸಿ ಪೊಲೀಸ್ ಠಾಣೆ ಆವರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ಸಚಿವ ಸುಧಾಕರ್ ವಿರುದ್ಧ (Sudhakar) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜರಬಂಡನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಮನೆ ಮಂಜೂರಾತಿ ಪತ್ರದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಜೂರಾತಿ ಪತ್ರಗಳಲ್ಲಿ ಸಚಿವರ ಭಾವಚಿತ್ರ ಹಾಕಿದನ್ನ ಪ್ರಶ್ನಿಸಿದ್ದಕ್ಕೆ ಪ್ರಕರಣ ದಾಖಲಾಗಿತ್ತು. ಪ್ರಶ್ನೆ ಮಾಡಿದವರ ಮೇಲೆ ಕೇಸ್ ಹಾಕಿ ಅರೆಸ್ಟ್ ಮಾಡುವ ಔಚಿತ್ಯ ಏನಿತ್ತು ಅಂತ ಪ್ರಶ್ನಿಸಿದ್ದಾರೆ.
ಸಚಿವ ಸುಧಾಕರ್ ಅಣತಿಯಂತೆ ಮಂಚೇನಹಳ್ಳಿ ಪೊಲೀಸರು ಕೆಲಸ ಮಾಡುತ್ತಿದ್ದಾರೆ ಅಂತ ಆರೋಪಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದಿನೇ ದಿನೇ ಕಾಂಗ್ರೆಸ್ ಮುಖಂಡರ ಮೇಲೆ ಪೊಲೀಸ್ ದೌರ್ಜನ್ಯ ಹೆಚ್ಚುತ್ತಿದೆ ಅಂತ ಆರೋಪ ಮಾಡಿದ್ದಾರೆ. ಇದನ್ನೂ ಓದಿ : – ED ವಿಚಾರಣೆಗೆ ಹೆಚ್ಚಿನ ಸಮಯಾವಕಾಶ ಕೇಳಿದ ಸೋನಿಯಾ ಗಾಂಧಿ