ಕಾಂಗ್ರೆಸ್ ನಾಯಕ, ಸುಪ್ರೀಂ ಕೋರ್ಟ್ ವಕೀಲ ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ವಕ್ತಾರರಾಗಿದ್ದ ಬ್ರಿಜೇಶ್ ಕಾಳಪ್ಪ ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಅವಕಾಶ ಕೈ ತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಕುರಿತಂತೆ ತಮ್ಮ ಫೇಸ್ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಬ್ರಿಜೇಶ್ ಕಾಳಪ್ಪ 1997ರಲ್ಲಿ ಆರಂಭವಾದ ಕಾಂಗ್ರೆಸ್ನೊಂದಿಗಿನ ಒಡನಾಟಕ್ಕೆ ಫುಲ್ಸ್ಟಾಪ್ ಹಾಕಿದ್ದಾರೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ರಾಜೀನಾಮೆ ಪತ್ರ ರವಾನಿಸಿರುವ ಬ್ರಿಜೇಶ್ ಕಾಳಪ್ಪ ಪಕ್ಷದಲ್ಲಿ ಇಷ್ಟು ವರ್ಷ ನಾನಾ ಜವಾಬ್ದಾರಿ ನೀಡಿದ್ದಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ಇದನ್ನೂ ಓದಿ : – Rajya Sabha Election- ಕಾಂಗ್ರೆಸ್ ಅಭ್ಯರ್ಥಿಯಾಗಿ ಜೈ ರಾಂ ರಮೇಶ್ ,ಮನ್ಸೂರ್ ಆಲಿ ಖಾನ್ ನಾಮಪತ್ರ ಸಲ್ಲಿಕೆ
ಇದೇ ವೇಳೆ ತಮ್ಮನ್ನು ಕರ್ನಾಟಕ ಸರ್ಕಾರದ ಕಾನೂನು ಸಲಹೆಗಾರನಾಗಿ ಸಚಿವ ಸ್ಥಾನದೊಂದಿಗೆ ನೇಮಕಗೊಂಡಿದಕ್ಕೆ ಧನ್ಯವಾದ, ಈ ಹಿನ್ನೆಲೆಯಲ್ಲಿ 1997ರಲ್ಲಿ ಆರಂಭವಾದ ಒಡನಾಟ ಕೊನೆಗೊಳಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ 2013ರ ಯುಪಿಎ ಸರ್ಕಾರದ ಅವಧಿಯಿಂದ ಇದುವರೆಗೂ ಸುಮಾರು 6,497 ಚರ್ಚೆಗಳಲ್ಲಿ ಹಿಂದಿ, ಇಂಗ್ಲೀಷ್ ಮತ್ತು ಕನ್ನಡ ಚಾನೆಲ್ಗಳಲ್ಲಿ ಪಕ್ಷವನ್ನು ಪ್ರತಿನಿಧಿಸಿದ್ದೇನೆ. ಅಲ್ಲದೇ ಪಕ್ಷ ತಮಗೆ ವಹಿಸಿಕೊಟ್ಟಿದ್ದ ರಾಜಕೀಯ ಕೆಲಸಗಳನ್ನು ಸಮರ್ಥವಾಗಿ ನಿಭಾಯಿಸಿದ ತೃಪ್ತಿ ಇದೆ ಅಂತ ಧನ್ಯವಾದ ತಿಳಿಸಿದ್ದಾರೆ.
ಇದನ್ನೂ ಓದಿ : – ರಾಜ್ಯಸಭೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆ – ಡಿಕೆಶಿ ವಿರುದ್ಧ ಮುದ್ದಹನುಮೇಗೌಡ ಅಸಮಾಧಾನ