ಪಿಎಸ್ಐ ನೇಮಕಾತಿ ಹಗರಣ ಕುರಿತಂತೆ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಯುತ್ತಿದೆ, ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ, ಮುಕ್ತ ಮತ್ತು ನ್ಯಾಯಸಮ್ಮತ ತನಿಖೆ ನಡೆಯುತ್ತಿದೆ, ಪ್ರತಿದಿನ ಆರೋಪಿಗಳು ಬಂಧನವಾಗುತ್ತಿರುವುದು ಇದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮರ್ಥಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಿಎಸ್ಐ ನೇಮಕಾತಿ ಪರೀಕ್ಷೆ ಹಗರಣದಲ್ಲಿ ನಿಷ್ಪಕ್ಷಪಾತ, ನಿಷ್ಠುರ ತನಿಖೆಯಾಗಬೇಕೆಂಬುದೇ ಸರ್ಕಾರದ ಉದ್ದೇಶ. ಕಾಂಗ್ರೆಸ್ ನವರು ಇದರಲ್ಲಿ ಭಾಗಿಯಾಗಿದ್ದಾರೆ ಎಂಬ ಸಂದೇಹ ಉಂಟಾಗುತ್ತಿದೆ, ಎಲ್ಲಿ ತಮ್ಮ ಬಣ್ಣ ಬಯಲಾಗುತ್ತದೋ ಎಂಬ ಭಯ ಅವರಿಗೆ ಶುರುವಾಗಿದೆ ಎಂದು ಸಿಎಂ ವಾಗ್ದಾಳಿ ನಡೆಸಿದರು.
ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಆರೋಪಕ್ಕೆ ಯಾವುದೇ ಸಾಕ್ಷಿಗಳಿಲ್ಲ, ಸುಖಾಸುಮ್ಮನೆ ಆಧಾರರಹಿತ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು. ಜವಾಬ್ದಾರಿಯುತ ವಿರೋಧ ಪಕ್ಷದಲ್ಲಿದ್ದುಕೊಂಡು ಆರೋಪ ಮಾಡುವಾಗ ಸಣ್ಣ ಸಾಕ್ಷಿಯಾದರೂ ಬೇಕು, ಅದಕ್ಕೆ ಸಚಿವ ಅಶ್ವಥ್ ನಾರಾಯಣ ವಿರುದ್ಧ ಹಿಟ್ ಅಂಡ್ ರನ್ ಮಾಡುತ್ತಿದ್ದಾರೆ, ಹಿಟ್ ಅಂಡ್ ರನ್ ವರ್ತನೆ ಹೆಚ್ಚು ದಿನ ನಡೆಯುವುದಿಲ್ಲ. ಇದನ್ನು ಓದಿ :- ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣ – ಮತ್ತೋರ್ವ ಆರೋಪಿ ಬಂಧಿಸಿದ ಸಿಐಡಿ..!
ಕಾಂಗ್ರೆಸ್ ನಾಯಕರು ಸೇರಿದಂತೆ ಎಲ್ಲರೂ ಪಿಎಸ್ಐ ಅಕ್ರಮದ ಬಗ್ಗೆ ನೀಡುವ ದೂರುಗಳು ಮತ್ತು ದಾಖಲೆಗಳನ್ನು ಪರಿಶೀಲಿಸುತ್ತೇವೆ. ತನಿಖೆಯನ್ನು ಮಾಡಿಸಿ ಯಾರೇ ತಪ್ಪಿತಸ್ಥರಿದ್ದರೂ ಕ್ರಮ ಕೈಗೊಳ್ಳಲಾಗುತ್ತದೆ, ಅದರಲ್ಲಿ ರಾಜಿಯಿಲ್ಲ ಎಂದರು. ಹಲವಾರು ಅಧಿಕಾರಿಗಳ ಸಮೇತರಾಗಿ ಕಾರ್ಯಾಚರಣೆ ಮಾಡುತ್ತಿರುವುದೇ ಅದಕ್ಕೆ ಸಾಕ್ಷಿ ಎಂದರು. ಇದನ್ನು ಓದಿ :- ಪಿಎಸ್ಐ ಪರೀಕ್ಷೆ ಅಕ್ರಮವನ್ನು ಪೊಲೀಸರೇ ಹೊರತಂದಿದ್ದಾರೆ – ಹೆಚ್.ಡಿ ಕುಮಾರಸ್ವಾಮಿ