ಸರ್ಕಾರದ ವಿರುದ್ಧ ಕಾಂಗ್ರೆಸ್ (CONGRESS) ಸಮರ ಸಾರಿದ್ದು, ಇಂದು ಬೆಂಗಳೂರಿನ ಹಲವೆಡೆ ಬೃಹತ್ ಪ್ರತಿಭಟನೆಗೆ ಮುಂದಾಗಿದೆ. ನಗರದ 300 ಸ್ಥಳಗಳಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಯಲಿದೆ.
200 ಸಿಗ್ನಲ್, 25 ಮೆಟ್ರೋ ಸ್ಟೇಷನ್ 26 ಫ್ಲೈಓವರ್ ಗಳಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. ಟ್ರಿನಿಟಿ ಸರ್ಕಲ್ ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ( D.K SHOVKUMAR )ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆ, ಪೊಲೀಸ್ ಇಲಾಖೆ ಯಾವುದೇ ಅನುಮತಿ ನೀಡಿಲ್ಲ. ಆಯಾ ವಿಭಾಗದ ಡಿಸಿಪಿಗಳಿಗೆ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರತಿಭಟನೆಗೆ ಅವಕಾಶ ನೀಡದಂತೆ ಖಡಕ್ ಆದೇಶ ನೀಡಿದ್ದಾರೆ. ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲು ನಗರ ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯಿಂದ ಬೆಂಗಳೂರಿನ ಹೃದಯ ಭಾಗಕ್ಕೆ ಬರುವವರಿಗೆ ಟ್ರಾಫಿಕ್ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಇದನ್ನು ಓದಿ :- ಕೋಲಾರದಲ್ಲಿ ಸಿದ್ದರಾಮಯ್ಯಗೆ ಕೊನೆಗೂ ಸಿಕ್ತು ಮನೆ…!
ಕಾಂಗ್ರೆಸ್ ಪ್ರತಿಭಟನೆಗೆ ಖಾಕಿ ಹೈಅಲರ್ಟ್
ಕಾಂಗ್ರೆಸ್ ಪ್ರತಿಭಟನೆಗೆ ಪೊಲೀಸರು ಅನುಮತಿ ನೀಡದಿರುವುದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ ಪೊಲೀಸರು ಅಲರ್ಟ್ ಆಗಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸೂಕ್ಷ್ಮ ಪ್ರದೇಶಗಳಲ್ಲಿ KSRP ತುಕಡಿ ನಿಯೋಜಿಸಲಾಗಿದೆ. ಅಲ್ಲದೇ ಪ್ರತಿಭಟನೆ ನಡೆಸುವವರನ್ನ ಸ್ಥಳದಲ್ಲೇ ವಶಕ್ಕೆ ಪಡೆಯುವಂತೆ ಸೂಚನೆ ನೀಡಿದ್ದಾರೆ. ನಗರದಾದ್ಯಂತ ಎಲ್ಲಾ ಡಿವಿಷನ್ ಗಳು ಸೇರಿ 2 ಸಾವಿರಕ್ಕೂ ಹೆಚ್ಚು ಪೊಲೀಸರನ್ನ ನಿಯೋಜಿಸಲು ಸಿದ್ಧತೆ ನಡೆಸಿದೆ.
ಇದನ್ನು ಓದಿ :- ಸಿದ್ದರಾಮಯ್ಯನ ಟೀಕೆ ಟಿಪ್ಪಣಿ ಗಳಿಗೆ ಕಿವಿಗೊಡುವ ಅಗತ್ಯವಿಲ್ಲ – ಸಿ.ಸಿ ಪಾಟೀಲ್