ಗಾಂಧಿ ಕುಟುಂಬದ 2 ಸಾವಿರ ಕೋಟಿ ಆಸ್ತಿ ರಕ್ಷಿಸಲು ಕಾಂಗ್ರೆಸ್ ಪ್ರತಿಭಟನೆ – ಸ್ಮೃತಿ ಇರಾನಿ ವ್ಯಂಗ್ಯ

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೆಹಲಿ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಿದ್ದಾರೆ. ಇದನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ.


ಬಿಜೆಪಿ ನಾಯಕಿ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕಾಂಗ್ರೆಸ್ ಪ್ರತಿಭಟನೆ ನಡೆಸುವ ಮೂಲಕ ಭ್ರಷ್ಟಾಚಾರದ ಬೆಂಬಲಕ್ಕೆ ನಿಂತಿದೆ. ಜೈಲಿನಿಂದ ಜಾಮೀನಿನ ಮೇಲೆ ಬಂದವರು ದೆಹಲಿ ಸುತ್ತುವರೆಯಲು ಬನ್ನಿ ಎಂದು ಘೋಷಿಸಿದ್ದಾರೆ. ತನಿಖಾ ಸಂಸ್ಥೆಯ ಮೇಲೆ ಒತ್ತಡ ಹೇರಲು ಕಾಂಗ್ರೆಸ್ ಆಡಳಿತದ ಸಚಿವರನ್ನು ಆಹ್ವಾನಿಸಲಾಗಿದೆ. ಏಜೆನ್ಸಿಯ ಮೇಲೆ ಈ ರೀತಿ ಒತ್ತಡಕ್ಕೆ ನೀವು ಯಾವ ಹೆಸರನ್ನು ನೀಡುತ್ತೀರಿ ಎಂದು ಪ್ರಶ್ನಿಸಿದ್ದಾರೆ. ಗಾಂಧಿ ಕುಟುಂಬದ 2 ಸಾವಿರ ಕೋಟಿ ಆಸ್ತಿ ರಕ್ಷಿಸಲು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ ಎಂದು ಸ್ಮೃತಿ ಇರಾನಿ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ : –  ರಾಹುಲ್, ಸೋನಿಯಾ ಗಾಂಧಿ ಬೆಂಬಲಕ್ಕೆ ನಿಂತ ಕಾಂಗ್ರೆಸ್ – ಪ್ರತಿಭಟನೆ ತಡೆದ ಪೊಲೀಸರು, ಹಲವು ನಾಯಕರು ವಶಕ್ಕೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!