ಚಿಕ್ಕಮಗಳೂರು ( CHIKKAMAGALURU ) ನಗರದಲ್ಲಿ ಬೃಹತ್ ಸಂಕೀರ್ತನಾ ಯಾತ್ರೆ ಆರಂಭವಾಗಿದೆ. ಮೊದಲ ದಿನವಾದ ಇಂದು ಅನುಸೂಯ ಜಯಂತಿ ಹಿನ್ನೆಲೆಯಲ್ಲಿ ಸಾವಿರಾರು ಮಹಿಳೆಯರು ದತ್ತಪೀಠಕ್ಕೆ ತೆರಳಿ ಅನುಸೂಯ ದೇವಿಯ ದರ್ಶನ ಪಡೆಯಲಿದ್ದಾರೆ.
ನಗರದ ಬೋಳರಾಮೇಶ್ವರ ದೇವಸ್ಥಾನದಿಂದ 5 ಸಾವಿರಕ್ಕೂ ಅಧಿಕ ಮಹಿಳೆಯರು ಹೆಜ್ಜೆ ಹಾಕಿದ್ದಾರೆ. ಕೇಸರಿ ಸೀರೆಯುಟ್ಟು ಐ.ಜಿ.ರಸ್ತೆ ಮೂಲಕ ಕಾಮಧೇನು ಗಣಪತಿ ( GANAPATHI ) ದೇವಸ್ಥಾನದವರೆಗೆ ಮೆರವಣಿಗೆಯಲ್ಲಿ ಆಗಮಿಸಲಿದ್ದಾರೆ. ಮೆರವಣಿಗೆ ಬಳಿಕ ದತ್ತಪೀಠಕ್ಕೆ ತೆರಳಿ ದತ್ತಪೀಠದಲ್ಲಿ ಹೋಮ-ಹವನ ನಡೆಸಲಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ನಗರ ಹಾಗೂ ದತ್ತಪೀಠದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಇದನ್ನೂ ಓದಿ : – ಕರವೇ ನಡೆ ಬೆಳಗಾವಿ ಕಡೆ ಚಳುವಳಿ – ಹಿರೇಬಾಗೇವಾಡಿ ಟೋಲ್ ಬಳಿ ಬಿಗಿ ಭದ್ರತೆ
ಉತ್ಸವಕ್ಕೆ ಅಡ್ಡಿಪಡಿಸುವ ಹುನ್ನಾರ
ಇದೇ ವೇಳೆ ಕಾಫಿನಾಡಿನಲ್ಲಿ ದತ್ತ ಜಯಂತಿ ಉತ್ಸವಕ್ಕೆ ಅಡ್ಡಿಪಡಿಸುವ ಹುನ್ನಾರ ನಡೆದಿದೆ. ದತ್ತಪೀಠ ( DATTAPEETA ) ಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ವಾಹನಗಳು ಅಪಘಾತವಾಗುವ ರೀತಿಯಲ್ಲಿ ಕಿಡಿಗೇಡಿಗಳು ಸಂಚುರೂಪಿಸಿದ್ದಾರೆ. ರಸ್ತೆ ಉದ್ದಕ್ಕೂ ಮೊಳೆಗಳನ್ನು ಹಾಕಿ ಅಪಘಾತ ಮಾಡುವ ಹುನ್ನಾರ ನಡೆಸಿದ್ದಾರೆ. ಕೈಮಾರ ಚೆಕ್ ಪೋಸ್ಟ್ ನಿಂದ ದತ್ತಪೀಠದ ರಸ್ತೆಯ ಉದ್ದಕ್ಕೂ ಮೊಳೆಗಳನ್ನ ಎಸೆದಿದ್ದಾರೆ. ಸ್ಥಳಕ್ಕೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : – ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆ ಮಾಡಲು ಸರ್ಕಾರ ಬದ್ಧ – ಸಿಎಂ ಬೊಮ್ಮಾಯಿ