ಮತದಾರರ ಪಟ್ಟಿ (Voters list) ಯಲ್ಲಿ ಹೆಸರುಗಳ ಡಿಲೀಟ್ (Delete) ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರಿಗೆ ಪೊಲೀಸರಿಂದ ನೋಟಿಸ್ (Police notice) ಜಾರಿಯಾಗಿದೆ. ಚಿಲುಮೆ ಸಂಸ್ಥೆ (Chilume organization) ಯ ನಾಲ್ವರು ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಹಲಸೂರು ಗೇಟ್ ಪೊಲೀಸರು ನೋಟಿಸ್ ನೀಡಿದ್ದಾರೆ. ಎಫ್ಐಆರ್ ದಾಖಲಾಗುತ್ತಿದ್ದಂತೆ ಚಿಲುಮೆ ಸಂಸ್ಥೆಯ ಮೂವರು ನಾಪತ್ತೆಯಾಗಿದ್ದಾರೆ.
ಚಿಲುಮೆ ಸಂಸ್ಥೆಯ ರವಿಕುಮಾರ್ ಸೇರಿದಂತೆ ಮೂವರು ನಾಪತ್ತೆಯಾಗಿದ್ದಾರೆ. ಅಮಾನತುಗೊಂಡ ಆರ್ ಓ ಚಂದ್ರಶೇಖರ್ ನನ್ನ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. ಬಿಎಲ್ಓ ಕಾರ್ಡ್ ಗೆ ಸಹಕಾರ ನೀಡಿದ ಆರೋಪದ ಮೇಲೆ ವಿಚಾರಣೆ ನಡೆಸಲಾಗಿದೆ. ಇಂದು ಕೂಡ ವಿಚಾರಣೆಗೆ ಹಾಜರಾಗಲು ಪೊಲೀಸರು ನೋಟಿಸ್ ನೀಡಿದ್ದಾರೆ. ಚಿಲುಮೆ ಸಂಸ್ಥೆಗೆ ಸೇರಿದ ಬ್ಯಾಂಕ್ ಖಾತೆಗಳ ಪರಿಶೀಲನೆ ನಡೆಸಿದ್ದಾರೆ. ಎಸಿಪಿ ನಾರಾಯಣಸ್ವಾಮಿ ತಂಡದಿಂದ ಅಕೌಂಟ್ ಗಳ ಪರಿಶೀಲನೆ ನಡೆದಿದೆ. ಬ್ಯಾಂಕ್ ಖಾತೆಗಳ ವಹಿವಾಟು ಪರಿಶೀಲನೆ ನಡೆಸಲಾಗಿದೆ. ಎಲ್ಲೆಲ್ಲಿಂದ ಹಣ ಬಂದಿದೆ, ಯಾರಿಂದ ಹಣ ಬಂದಿದೆ ಅನ್ನೋ ಬಗ್ಗೆ ಪರಿಶೀಲನೆ ನಡೆದಿದೆ. ಇದನ್ನೂ ಓದಿ : – ವೋಟರ್ ಐಡಿಯಿಂದ ಮಹಾನ್ ಆಪತ್ತು ಬರುತ್ತೆ ಅಂತ ನಂಗೆನೂ ಅನ್ಸಲ್ಲ – ಹೆಚ್.ಡಿ ಕುಮಾರಸ್ವಾಮಿ
ಬ್ಯಾಂಕ್ ಅಕೌಂಟ್ ಪರಿಶೀಲನೆ ನಡೆಸಿ ತಾತ್ಕಾಲಿಕವಾಗಿ ಅಕೌಂಟ್ ಫ್ರೀಜ್ ಮಾಡಲು ಪೊಲೀಸರು ನಿರ್ಧರಿಸಿದ್ದಾರೆ. ಚಿಲುಮೆ ಸಂಸ್ಥೆ ರವಿಕುಮಾರ್ ಪತ್ನಿ ಐಶ್ವರ್ಯಳ್ಳನ್ನ ಹಲಸೂರು ಗೇಟ್ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಕೃಷ್ಣೇಗೌಡನ ತೋಟದ ಮನೆಯಲ್ಲಿ ದಾಖಲೆಗಳು ಪತ್ತೆಯಾಗಿದೆ. ದಾಖಲೆಗಳ ಜೊತೆಗೆ ಹಲವು ಚೆಕ್ ಗಳನ್ನು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ : – ಊರುಕುಂಟೆ ಮಿಟ್ಟೂರು ಗ್ರಾಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ..!