ಪರಮೇಶ್ವರ್ (Parameshwar) ಪಕ್ಷದ ಶಿಸ್ತಿನ ಸಿಪಾಯಿ. ಅವರಂತವರು ಈ ರಾಜ್ಯದಲ್ಲಿ ಯಾರು ಇಲ್ಲ. ಅವರು ರಾಜೀನಾಮೆ ಏಕೆ ಕೊಡ್ತಾರೆ,ಅದರ ಅವಶ್ಯಕತೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK.Shivakumar) ತಿಳಿಸಿದ್ದಾರೆ.
ಪ್ರಜಾ ಧ್ವನಿ ಯಾತ್ರೆಯ ಸಮಾವೇಶದ ಬಳಿಕ ಮುಳಬಾಗಿಲಿನಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಬೆಂಗಳೂರು ಟ್ರಾಫಿಕ್ ಹಾಗೂ ಕುಡಿಯುವ ನೀರಿನ ವಿಚಾರವಾಗಿ ಸುರ್ಜೆವಾಲ (Surjewala) ಜೊತೆ ಚರ್ಚೆ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ : – ಕಿಚ್ಚನ ಜೊತೆ ಚಿತ್ರ ರಂಗದ ಸಮಸ್ಯೆ ಕುರಿತು ಚರ್ಚಿಸಿದ್ದೇವೆ – ಡಿ.ಕೆ.ಶಿವಕುಮಾರ್
ಕೆ.ಎಚ್ ಮುನಿಯಪ್ಪ(KH.Muniyappa) ಗೆ ಯಾವುದು ಅಸಮಾಧಾನ ಇಲ್ಲ. ನಾವೆಲ್ಲರು ಒಗ್ಗಟಾಗಿದ್ದೇವೆ ಎಂದು ಹೇಳಿದ್ರು. ಸಿದ್ದರಾಮಯ್ಯ ನನ್ನ ವಿರುದ್ಧ ಯಾವುದೇ ಪತ್ರ ಬರೆದಿಲ್ಲ. ಬಿಜೆಪಿ ಕುಚೇಷ್ಟೆ ಮಾಡಿಕೊಂಡು ಬೋಗಸ್ ಮಾಡ್ತಿದ್ದಾರೆ. ದಿನಕ್ಕೆ ಒಂದು ವಿಡಿಯೋ ಹಾಕೋದು, ಪತ್ರ ಹಾಕೋದು ಮಾಡಿ ಬಿಜೆಪಿಯವ್ರು ಮಿಸ್ ಗೈಡ್ ಮಾಡ್ತಿದ್ದಾರೆ. ಅದು ಸಿದ್ದರಾಮಯ್ಯ ನವರ ಸಹಿ ಅಲ್ಲ. ಈ ಬಗ್ಗೆ ಸಿದ್ದರಾಮಯ್ಯನವರೇ ದೂರು ದಾಖಲು ಮಾಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ : – ಒಬ್ಬ ಅಭ್ಯರ್ಥಿ ಏಕಕಾಲಕ್ಕೆ ಎರಡು ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸಬಹುದು – ಸುಪ್ರೀಂ ಕೋರ್ಟ್