ಪಿಎಸ್ಐ ನೇಮಕಾತಿ ಪರೀಕ್ಷೆಯ ಅಕ್ರಮಕ್ಕೆ ಸಾಥ್ ನೀಡಿರುವ ಆರೋಪದಡಿ ಬಿಜೆಪಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ದಿವ್ಯಾ ಹಾಗರಗಿಯನ್ನು ಶುಕ್ರವಾರ ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಸದ್ಯ 11 ದಿನಗಳ ಕಾಲ ದಿವ್ಯಾ ಹಾಗರಗಿಯನ್ನು ನ್ಯಾಯಾಲಯ ಸಿಐಡಿ ಕಸ್ಟಡಿಗೆ ನೀಡಿದೆ.
ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ದಿವ್ಯಾ ಹಾಗರಗಿ ಕಳೆದ 18 ದಿನಗಳಿಂದ ತಲೆ ಮರೆಸಿಕೊಂಡಿದ್ದರು. ಆದರೆ ಸಿಐಡಿ ಅಧಿಕಾರಿಗಳು ಶುಕ್ರವಾರ ಮಹಾರಾಷ್ಟ್ರದ ಪುಣೆಯ ಹೋಟೆಲ್ವೊಂದರ ಬಳಿ ದಿವ್ಯಾ ಹಾಗರಗಿಯನ್ನು ಬಂಧಿಸಿದ್ದಾರೆ. ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ದಿವ್ಯಾ ಹಾಗರಗಿ ಕಳೆದ ರಾತ್ರಿ ಮಹಿಳಾ ನಿಲಯದಲ್ಲಿಯೇ ಕಾಲ ಕಳೆದಿದ್ದಾರೆ. ಇದನ್ನೂ ಓದಿ :- ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ – ದಿವ್ಯಾ ಹಾಗರಗಿ ಬಂಧನ
ಕೋಟಿ, ಕೋಟಿ ಹಣವಿದ್ದರೂ ಅಕ್ರಮದ ಜಾಲಕ್ಕೆ ಸಿಲುಕಿರುವ ದಿವ್ಯಾ ಹಾಗರಗಿ ಇದೀಗ ತಮ್ಮನ್ನು ಭೇಟಿಯಾದವರ ಮುಂದೆ ಪಶ್ಚಾತ್ತಾಪದ ಮಾತುಗಳನ್ನಾಡುತ್ತಿದ್ದಾರೆ. ಕಲಬುರಗಿ ನಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮದಲ್ಲಿ ದಿವ್ಯಾ ಹಾಗರಗಿ ಕೋಟ್ಯಂತರ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಇವೆಲ್ಲವೂ ಪಿತ್ರಾರ್ಜಿತವಾಗಿ ಬಂದಿರುವ ಆಸ್ತಿಯಾಗಿದೆ.
ಇದನ್ನೂ ಓದಿ :- ಪಿಎಸ್ ಐ ಪರೀಕ್ಷೆ ಅಕ್ರಮ ಪ್ರಕರಣ – ಪತ್ರದ ಮೂಲಕ ಸಿಐಡಿ ತರಾಟೆಗೆ ತೆಗೆದುಕೊಂಡ ಪ್ರಿಯಾಂಕ್ ಖರ್ಗೆ