ಬೆಂಗಳೂರಿ (Bengaluru) ನಲ್ಲಿ ವಿದ್ಯುತ್ ಬಿಲ್ ಕಟ್ಟದೇ ವಿಳಂಬ ಮಾಡಿದರೆ ಲೈಸೆನ್ಸ್ ರದ್ದಾಗುತ್ತದೆ. ನಿಮ್ಮ ಮನೆಯ ವಿದ್ಯುತ್ ಸಂಪರ್ಕದ ಪರವಾನಗಿ ರದ್ದಾಗುತ್ತದೆ. ವಿದ್ಯುತ್ ಬಾಕಿ ಬಿಲ್ ಸಂಗ್ರಹಕ್ಕೆ BESCOM ಹೊಸ ಅಸ್ತ್ರ ಪ್ರಯೋಗಿಸಿದೆ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ರೆ 3 ತಿಂಗಳೊಳಗೆ ಕಟ್ಟಬೇಕು. ಬಿಲ್ ಕಟ್ಟಿಲ್ಲ ಎಂದು ಸಿಬ್ಬಂದಿ ಬಂದು ಫ್ಯೂಸ್ ತೆಗೆಯುವುದಿಲ್ಲ.
ಮನೆಗೆ ನೀಡಿರುವ ವಿದ್ಯುತ್ ಸಂಪರ್ಕದ ಲೈಸೆನ್ಸ್ ರದ್ದಾಗುತ್ತದೆ. ವಿದ್ಯುತ್ ಬಾಕಿ ಬಿಲ್ ಸಂಗ್ರಹಕ್ಕೆ ಗ್ರಾಹಕರ ಮೇಲೆ ಬೆಸ್ಕಾಂ ಹೊಸ ಬ್ರಹ್ಮಾಸ್ತ್ರ ಪ್ರಯೋಗಿಸಲು ಮುಂದಾಗಿದೆ. ಇನ್ಮೇಲೆ 3 ತಿಂಗಳು ವಿದ್ಯುತ್ ಬಿಲ್ ಬಾಕಿ ಇದ್ದರೆ ವಿದ್ಯುತ್ ಸಂಪರ್ಕದ ಒಪ್ಪಂದವೇ ರದ್ದಾಗಲಿದೆ. ವಿದ್ಯುತ್ ಸಂಪರ್ಕ ಒಪ್ಪಂದ ರದ್ದುಗೊಂಡರೆ ಪುನಃ ಅರ್ಜಿ ಸಲ್ಲಿಸಿ ಹೊಸ ಕನೆಕ್ಷನ್ ತೆಗೆದುಕೊಳ್ಳಲೇಬೇಕು. ವಿದ್ಯುತ್ ಬಿಲ್ ಪಾವತಿಸುವಲ್ಲಿ ವಿಳಂಬ ಮಾಡಿದ್ರೆ, ಕರೆಂಟ್ ಇಲ್ಲದೆ ಕತ್ತಲಲ್ಲೇ ಜೀವನ ನಡೆಸುವಂತಹ ಸ್ಥಿತಿ ಉಂಟಾಗಲಿದೆ. ಬೆಸ್ಕಾಂನ ಹೊಸ ಯೋಜನೆಯಿಂದ ಹೊರ ದೇಶಗಳಿಗೆ ಪ್ರಯಾಣ ಬೆಳೆಸುವವರು, ಬಾಕಿ ಬಿಲ್ ಉಳಿಸಿಕೊಂಡವರಿಗೆ ಆತಂಕ ಶುರುವಾಗಿದೆ. ಸರಿಯಾದ ಸಮಯಕ್ಕೆ ಬಿಲ್ ಕಟ್ಟಿ ಎಂದು ಬೆಸ್ಕಾಂ ಎಂಡಿ ಟ್ವೀಟ್ ಮಾಡಿದ್ದಾರೆ. ತಿಂಗಳಿಗೆ ಸರಿಯಾಗಿ ಬಿಲ್ ಪಾವತಿಸದೆ ನಿರ್ಲಕ್ಷ್ಯ ತೋರುವರರ ವಿರುದ್ಧ ಬೆಸ್ಕಾಂ ಸಮರ ಸಾರಿದೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲು ನೂತನ ಪ್ರಯೋಗ ಮಾಡುತ್ತಿದೆ. ಈ ಬಗ್ಗೆ ಬೆಸ್ಕಾಂ ಎಂ.ಡಿ ಮಹಾಂತೇಶ ಬೀಳಗಿ ಟ್ವೀಟ್ ಮೂಲಕ ಗ್ರಾಹಕರಿಗೆ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : – ಶಬರಿಮಲೆಯಲ್ಲಿ ನಾಳೆಯಿಂದ ಅಯ್ಯಪ್ಪ ದರ್ಶನ