ಮೋದಿಗೇನು ರಾವಣನಂತೆ 100 ತಲೆಗಳಿವೆಯೆ- ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ!

ಗುಜರಾತ್ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾವಣ ಎಂದು ಕರೆದಿರುವುದು ರಾಜಕೀಯ ಗದ್ದಲಕ್ಕೆ ಕಾರಣವಾಗಿದೆ.

ಗುಜರಾತ್ ( GUJURATH ) ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ( MALLIKARJUN KHARGE ) ಅವರು ಪ್ರಧಾನಿ ನರೇಂದ್ರ ಮೋದಿ ( NARENDRA MODI ) ಅವರನ್ನು ರಾವಣ ಎಂದು ಕರೆದಿರುವುದು ರಾಜಕೀಯ ಗದ್ದಲಕ್ಕೆ ಕಾರಣವಾಗಿದೆ. ಖರ್ಗೆ ಅವರು ಪದೇ-ಪದೇ ಗುಜರಾತಿನ ಮಗನನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದೆ. ಗುಜರಾತ್ ವಿಧಾನಸಭಾ ಚುನಾವಣೆಯ ಅಂಗವಾಗಿ ಅಹಮದಾಬಾದ್ನಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಅವರು ಮಾತನಾಡುತ್ತಾ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮೋದಿ ಜೀ ಅವರು ಪ್ರಧಾನಿಯಾಗಿದ್ದಾರೆ, ಆದ್ರೆ ತಮ್ಮ ಕೆಲಸವನ್ನು ಮರೆತು ಮಹಾನಗರಪಾಲಿಕೆ, ಎಂಎಲ್ಎ ಹಾಗೂ ಎಂಪಿ ಚುನಾವಣೆಗಳಲ್ಲಿ ಪ್ರಚಾರ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ. ಎಲ್ಲ ಸಮಯದಲ್ಲೂ ತಮ್ಮ ಬಗ್ಗೆ ಮಾತನಾಡುತ್ತಾರೆ. ಪ್ರಧಾನಿ ಮೋದಿ ಮಾತ್ರ ನೋಡಿ ಈಗ ಬಿಜೆಪಿಗೆ ಮತ ನೀಡಬೇಕಾಗಿದೆ. ಮೋದಿ ಅವರೇ ನಾವು ಎಷ್ಟು ಬಾರಿ ನಿಮ್ಮ ಮುಖ ನೋಡೋದು..? ನಿಮಗೆ ಎಷ್ಟು ರೂಪಗಳಿವೆ? ನಿಮಗೆ ರಾವಣ ( RAVANA ) ನಂತೆ 100 ತಲೆಗಳಿವೆಯೇ? ಎಂದು ವ್ಯಂಗ್ಯವಾಡಿದ್ದಾರೆ. ಬಿಜೆಪಿ ಅವರು ಪ್ರತಿ ಚುನಾವಣೆಯಲ್ಲೂ ಪ್ರಧಾನಿ ಮೋದಿ ಹೆಸರಿನಲ್ಲೇ ಮತ ಕೇಳುತ್ತಿದ್ದಾರೆ. ಅದನ್ನು ಬಿಟ್ಟು ಆಯಾ ಚುನಾವಣಾ ಅಭ್ಯರ್ಥಿಗಳ ಹೆಸರಿನಲ್ಲೇ ಮತ ಕೇಳಿ. ಮೋದಿ ಅವರು ಪುರಸಭೆಗೆ ಬಂದು ಕೆಲಸ ಮಾಡುತ್ತಾರೆಯೇ? ಕಷ್ಟದ ಸಮಯದಲ್ಲಿ ನಿಮಗೆ ಸಹಾಯ ಮಾಡುತ್ತಾರೆಯೇ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : –  ರಾಜಕೀಯ ಪ್ರೇರಿತವಾಗಿ ನನ್ನನ್ನು ಜೈಲಿಗೆ ಕಳಿಸಲಾಗಿತ್ತು – ಬಿಜೆಪಿಗೆ ತಿರುಗೇಟು ನೀಡಿದ ಡಿಕೆಶಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!