ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ (NDA) ಅಭ್ಯರ್ಥಿಯಾಗಿ ಜಾರ್ಖಂಡ್ ಮೂಲದ ಬುಡಕಟ್ಟು ಸಮುದಾಯದ ನಾಯಕಿ ದ್ರೌಪದಿ ಮುರ್ಮು ಅವರನ್ನ ಆಯ್ಕೆ ಮಾಡಲಾಗಿದೆ. ಮುರ್ಮು ಆಯ್ಕೆ ಬಗ್ಗೆ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಡ್ಯಾನ್ಸ್ ಮಾಡುವ ಮೂಲಕ ಸಂಭ್ರಮಿಸಿದ್ದಾರೆ.
ಈ ವಿಡಿಯೋವನ್ನು ಅವರು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದು, ಈ ಸಂತಸದ ಕ್ಷಣಗಳನ್ನು ಬುಡಕಟ್ಟು ಸಹೋದರ- ಸಹೋದರಿಯರೊಂದಿಗೆ ಜಾನಪದ ನೃತ್ಯ ಮಾಡುವ ಮೂಲಕ ಅಭಿನಂದಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ : – NDA ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅಖಾಡಕ್ಕೆ – ಪ್ರಧಾನಿ, ಹಲವು ರಾಜ್ಯಗಳ ಸಿಎಂ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ
ಬಿಜೆಪಿಗೆ ಬಹುಮತ ಇರುವುದಿಂದ ದ್ರೌಪದಿ ಮುರ್ಮು ಅವರೇ ರಾಷ್ಟಪತಿಯಾಗೋದು ಬಹುತೇಕ ಖಚಿತವಾಗಿದೆ. ಒಂದು ವೇಳೆ ದ್ರೌಮದಿ ಮುರ್ಮು ರಾಷ್ಟ್ರಪತಿಯಾಗಲು ಯಶಸ್ವಿಯಾದಲ್ಲಿ, ದೇಶದ ಉನ್ನತ ಸಾಂವಿಧಾನಿಕ ಹುದ್ದೆಗೇರಿದ 2ನೇ ಮಹಿಳೆ ಎಂಬ ಖ್ಯಾತಿ ಪಡೆಯಲಿದ್ದಾರೆ. ಅದೆಲ್ಲಕ್ಕಿಂತ ಹೆಚ್ಚಾಗಿ ಮೊದಲ ಒಡಿಶಾ ಪ್ರಜೆ ಹಾಗೂ ಬುಡಕಟ್ಟು ಪ್ರಜೆ ಎನಿಸಿಕೊಂಡು, ದಾಖಲೆ ಬರೆಯಲಿದ್ದಾರೆ.
ಇದನ್ನೂ ಓದಿ : – PRESIDENT ELECTION – ಪ್ರಧಾನಿ ಮೋದಿ ಭೇಟಿ ಮಾಡಿದ NDA ಅಭ್ಯರ್ಥಿ ದ್ರೌಪದಿ ಮುರ್ಮು