ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿ ಅವ್ಯವಹಾರ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ನಡೆಸುತ್ತಿರುವ ED ಎದುರು ಸತತ ಮೂರನೇ ದಿನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (RAHUL GANDHI) ವಿಚಾರಣೆಗೆ ಹಾಜರಾಗಿದ್ದಾರೆ.
ಇಂದು ಬೆಳಿಗ್ಗೆ 11.35ಕ್ಕೆ ರಾಹುಲ್ ಗಾಂಧಿ (RAHUL GANDHI) ಅವರು ತಮ್ಮ Z+ ವರ್ಗದ ಸಿಆರ್ಪಿಎಫ್ ಭದ್ರತಾ ಬೆಂಗಾವಲಿನೊಂದಿಗೆ ನವದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯದ ಪ್ರಧಾನ ಕಚೇರಿಗೆ ವಿಚಾರಣೆಗ ಹಾಜರಾಗಿದ್ದಾರೆ. ಈ ವೇಳೆ ಅಪಾರ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ನಾಯಕರು ರಾಹುಲ್ ಗಾಂಧಿ ಅವರಿಗೆ ಸಾಥ್ ನೀಡಿದರು. ಇದನ್ನೂ ಓದಿ : – ಇದು ಮಹಾ ಜುಮ್ಮಾಗಳ ಸರ್ಕಾರ – ED ವಿಚಾರಣೆಯಿಂದ ಹೊರಬರುತ್ತಿದ್ದಂತೆಯೇ ಮೋದಿ ವಿರುದ್ದ ರಾಹುಲ್ ಗಾಂಧಿ ಟ್ವೀಟ್
ಅತ್ತ ರಾಹುಲ್ ಗಾಂಧಿ ED ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುತ್ತಿದ್ದಂತೆಯೇ ಇತ್ತ ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ಇಡಿ ಕೈಗೊಂಡಿರುವ ಕ್ರಮದ ವಿರುದ್ಧ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಭಟನೆ ವೇಳೆ ಮಾತನಾಡಿರುವ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ನಾವೇನು ಭಯೋತ್ಪಾದಕರೇ? ನಮ್ಮ ಬಗ್ಗೆ ಭಯ ಏಕೆ? ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸ್ ಬಲ ಏಕೆ ಬಳಕೆ ಮಾಡುತ್ತಿದ್ದಾರೆ? ಎಂದು ಕಿಡಿಕಾರಿದರು.
ಇದನ್ನೂ ಓದಿ : – ರಾಷ್ಟ್ರಪತಿ ಚುನಾವಣೆ ಕುರಿತು ಚರ್ಚಿಸಲು ನಾಳೆ ಮಮತಾ ಬ್ಯಾನರ್ಜಿ ಸಭೆ – ಕಾಂಗ್ರೆಸ್ , ಎನ್ ಸಿ ಪಿ ಭಾಗಿ