ಕೊಡಗಿ( kodagu ) ನ ಮಳೆಹಾನಿ ಪ್ರದೇಶ ವೀಕ್ಷಣೆಗೆ ಹೋಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ( siddaramaiah ) ಗೆ ಕುಶಾಲನಗರದಲ್ಲಿ ಮೊಟ್ಟೆ ಎಸೆದ ಪ್ರಕರಣ ರಾಜ್ಯಾದ್ಯಂತ ವ್ಯಾಪಕ ಟೀಕೆಗೆ ಗುರಿಯಾಗಿದೆ. ಪಕ್ಷ ಅಥವಾ ಸಂಘಟನೆಗೆ ಸಂಬಂಧವಿಲ್ಲದ ಮೂರನೇ ವ್ಯಕ್ತಿಯೊಬ್ಬ ಕಾರಿಗೆ ಮೊಟ್ಟೆ ಎಸೆದು ಪ್ರತಿಭಟನೆ ದಿಕ್ಕು ತಪ್ಪಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಬಿಜೆಪಿ( bjp ) ಗರ ಪ್ರತಿಭಟನೆ ನ್ಯಾಯಯುತವಾಗಿತ್ತು. ಆದರೆ ಮೊಟ್ಟೆ ಎಸೆದದ್ದು ಬೇರಯವರು ಎಂದು ಶಾಸಕ ಅಪ್ಪಚ್ಚುರಂಜನ್ ತಿಳಿಸಿದ್ದಾರೆ. ಈ ಸಂಬಂಧ ಸೋಮವಾರಪೇಟೆಯ ವ್ಯಕ್ತಿಯ ಮೇಲೆ ಪೊಲೀಸರು ನಿಗಾವಹಿಸಿದ್ದು ಹೆಚ್ಚಿನ ವಿಚಾರಣೆ ಬಳಿಕ ಸತ್ಯಾಸತ್ಯತೆ ತಿಳಿಯಲಿದೆ. ಇನ್ನು ಪ್ರತಿಭಟನೆ ಸಂದರ್ಭ ಅತಿರೇಕ ವರ್ತನೆಗೆ ಕಾರಣ ಕೂಡುಮಂಗಳೂರು ಗ್ರಾಪಂ ಉಪಾಧ್ಯಕ್ಷ ಭಾಸ್ಕರ್ ನಾಯಕ್ ( bhaskar nayak ) ಸೋಮವಾರಪೇಟೆ ಮಂಡಲ ವಕ್ತಾರ ಕೆ.ಜಿ.ಮನು ಎಂಬವರನ್ನು ಪ್ರತಿಭಟನಾ ಸ್ಥಳದಲ್ಲೇ ಪೊಲೀಸರು ವಶಕ್ಕೆ ಪಡೆದಿದ್ದರು.
ಇವರೊಂದಿಗೆ ಸ್ವಯಂ ಪ್ರೇರಿತರಾಗಿ ಬಂದ ಇತರೆ 7 ಮಂದಿ ಸೇರಿ 9 ಮಂದಿ ವಿರುದ್ಧ ಕುಶಾಲನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತರ ಪರವಾಗಿ ಕೊಡಗು ಜಿಲ್ಲಾ ಶಾಸಕರುಗಳಾದ ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ ಠಾಣೆಗೆ ಆಗಮಿಸಿ ಬಿಡುಗಡೆಗೊಳಿಸುವಲ್ಲಿ ಮುಂದಾಳತ್ವ ವಹಿಸಿದರು.
ಇದನ್ನೂ ಓದಿ : – ರಾಜ್ಯದ ಎಲ್ಲ ಶಾಲೆ, ಪಿಯು ಕಾಲೇಜುಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ ಮಾಡಿ ಸರ್ಕಾರ ಆದೇಶ