ಉಪರಾಷ್ಟ್ರಪತಿ ಚುನಾವಣೆ- ಮಾರ್ಗರೇಟ್ ಆಳ್ವ ನಾಮಪತ್ರ ಸಲ್ಲಿಕೆ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾರ್ಗರೇಟ್ ಆಳ್ವ (Margaret Alva) ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್ ( congress) ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಅಧೀರ್ ರಂಜನ್ ಚೌಧರಿ, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ಶಿವಸೇನೆಯ ಸಂಜಯ್ ರಾವತ್ ಮತ್ತು ಇತರ ಪ್ರತಿಪಕ್ಷದ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಎನ್ ಡಿ ಎ ಅಭ್ಯರ್ಥಿಯಾಗಿ ನಿನ್ನೆ ಜಗದೀಫ್ ಧನ್ ಕರ್ ( Jagadif Dhan Kar ) ನಾಮಪತ್ರ ಸಲ್ಲಿಸಿದ್ದರು. ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಧಿಕಾರಾವಧಿ ಆಗಸ್ಟ್ 10ರಂದು ಕೊನೆಗೊಳ್ಳಲಿದೆ. ಆಗಸ್ಟ್ 6 ರಂದು ಚುನಾವಣೆ ನಡೆಯಲಿದ್ದು, ಅಂದೇ ಫಲಿತಾಂಶ ಬಹಿರಂಗಗೊಳ್ಳಲಿದೆ.

ಇದನ್ನು ಓದಿ : – ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಜಗದೀಪ್ ಧನ್ ಕರ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!