ವಿಶ್ವದ ಪ್ರಮುಖ ಜಾಲತಾಣ ಟ್ವಿಟ್ಟರ್ ಕಂಪನಿಯನ್ನು ಅಮೆರಿಕದ ಟೆಸ್ಲಾ ಎಲೆಕ್ಟ್ರಿಕ್ ಕಾರ್ ಕಂಪನಿ ಮುಖ್ಯಸ್ಥ ಹಾಗೂ ವಿಶ್ವದ ಅತ್ಯಂತ ಶ್ರೀಮಂತ ಉದ್ಯಮಿ ಎನಿಸಿಕೊಂಡಿರುವ ಎಲಾನ್ ಮಸ್ಕ್ ಪ್ರತಿ ಷೇರಿಗೆ 54.20 ಡಾಲರ್ನಂತೆ 44 ಶತಕೋಟಿ ಡಾಲರ್ ಮೊತ್ತಕ್ಕೆ ಟ್ವಿಟರ್ ಖರೀದಿ ಮಾಡಲು ಒಪ್ಪಿಕೊಂಡಿದ್ದಾರೆಂದು ತಿಳಿದುಬಂದಿದೆ.
ಟ್ವಿಟರ್ನ ಪ್ರತಿ ಷೇರಿಗೆ 54.20 ಡಾಲರ್ ನೀಡಿ ಪೂರ್ತಿ ಷೇರು ಖರೀದಿಸುವ ಎಲಾನ್ ಮಸ್ಕ್ ಪ್ರಸ್ತಾಪವನ್ನು ಟ್ವಿಟರ್ ಆಡಳಿತ ಮಂಡಳಿ ಒಪ್ಪಿದ್ದು, ಅದರಂತೆ ಹಲವು ದಿನಗಳಿಂದ ನಡೆಯುತ್ತಿದ್ದ ವ್ಯಾಪಾರ ಒಪ್ಪಂದಕ್ಕೆ ಅಂತಿಮ ಮುದ್ರೆ ಬದ್ದಿದೆ. ಎಲಾನ್ ಮಸ್ಕ್ ಅವರು ಟ್ವಿಟರ್ನಲ್ಲಿ ಶೇ 9.2ರಷ್ಟು ಷೇರು ಪಾಲು ಹೊಂದಿದ್ದರು. ನಂತರದಲ್ಲಿ ಪ್ರತಿ ಷೇರಿಗೆ 54.20 ಡಾಲರ್ (₹4149) ನಂತೆ ಪಾವತಿಸಿ, ಪೂರ್ತಿ ಪಾಲು ಖರೀದಿಗೆ ಇಂಗಿತ ವ್ಯಕ್ತಪಡಿಸಿದ್ದರು. ಟ್ವಿಟರ್ ಖರೀದಿ ಪ್ರಸ್ತಾಪಕ್ಕೆ ಮಂಡಳಿ ಸಮ್ಮತಿ ಸೂಚಿಸುವುದರೊಂದಿಗೆ, ಕಂಪನಿ ಪೂರ್ತಿಯಾಗಿ ಇದೀಗ ಎಲಾನ್ ಮಸ್ಕ್ ಪಾಲಾಗಿದೆ. ಇದನ್ನೂ ಓದಿ :- ರಾಣಾ ದಂಪತಿಗೆ ಹಿನ್ನಡೆ – ಎಫ್ ಐ ಆರ್ ರದ್ದುಗೊಳಿಸುವಂತೆ ಸಲ್ಲಿಕೆ ಮಾಡಿದ್ದ ಅರ್ಜಿ ವಜಾ
ಈ ಕುರಿತು ಎಲಾನ್ ಮಸ್ಕ್ ಟ್ವೀಟ್ ಮಾಡಿ ಟ್ವಿಟರ್ ಖರೀದಿಯನ್ನು ‘Yessss’ ಎಂದು ಸಂಭ್ರಮಿಸಿದ್ದಾರೆ.
ವಾಕ್ ಸ್ವಾತಂತ್ರ್ಯವು ಕಾರ್ಯರೂಪದಲ್ಲಿರುವ ಯಾವುದೇ ಪ್ರಜಾಪ್ರಭುತ್ವದ ತಳಹದಿಯಾಗಿದೆ. ಟ್ವಿಟರ್ ಎನ್ನುವ ಡಿಜಿಟಲ್ ಜಗಲಿಯಲ್ಲಿ ಮನುಷ್ಯತ್ವದ ಭವಿಷ್ಯದ ಬಗ್ಗೆ ಚರ್ಚೆಯಾಗುತ್ತದೆ. ಟ್ವಿಟರ್ನ ಆಲ್ಗೊರಿದಂಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡುವುದಷ್ಟೇ ಅಲ್ಲದೆ, ಎಲ್ಲರನ್ನೂ ತಲುಪುವಂತೆ ಮಾಡಬೇಕಿದೆ. ಟ್ವಿಟರ್ಗೆ ಅಗಾಧವಾಗಿ ಬೆಳೆಯುವ ಸಾಮರ್ಥ್ಯವಿದೆ. ಅದನ್ನು ಸಾಧ್ಯವಾಗಿಸಲು ಕಂಪನಿಯೊಂದಿಗೆ, ಬಳಕೆದಾರರೊಂದಿಗೆ ಕೆಲಸ ಮಾಡಲು ನಾನು ಬಯಸುತ್ತೇನೆಂದು ಹೇಳಿದ್ದಾರೆ.
ಇದನ್ನೂ ಓದಿ :- ಮೋದಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ವಿಚಾರ – ಜಿಗ್ನೇಶ್ ಮೇವಾನಿಗೆ ಕೊನೆಗೂ ಜಾಮೀನು