ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಯನ್ನು ಕೈಬಿಡುವಂತೆ ಹಾಗೂ ಸಿವಿಲ್ ನ್ಯಾಯಾಲಯ ನಿರ್ದೇಶನ ಮೇರೆಗೆ ನಡೆಸಲಾಗಿರುವ ವಿಡಿಯೋಗ್ರಫಿ ಸರ್ವೆಯನ್ನು ಅನೂರ್ಜಿತಗೊಳಿಸುವಂತೆ ಮಸೀದಿ ಆಡಳಿತ ಮಂಡಳಿ ಸಲ್ಲಿಸಿರುವ ಅರ್ಜಿಯನ್ನು ಇಂದು ವಾರಣಾಸಿ ಜಿಲ್ಲಾ ನ್ಯಾಯಾಲಯ ವಿಚಾರಣೆ ನಡೆಸಲಿದೆ.
ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ಕೋರಿ ಐದು ಮಂದಿ ಮಹಿಳೆಯರು ಅರ್ಜಿ ಸಲ್ಲಿಸಿದ್ದರು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಮಸೀದಿ ಆಡಳಿತ ಮಂಡಳಿ 1991 ರ ಪೂಜಾ ಸ್ಥಳಗಳ ನಿರ್ಬಂಧ ಕಾಯಿದೆ ಮತ್ತು ಆದೇಶ 7 ನಿಯಮ 11 ರ ಉಲ್ಲಂಘನೆಯಾಗಿದೆ ಎಂದು ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ :- ಜ್ಞಾನವಾಪಿ ಮಸೀದಿ ವಿವಾದ – ತೀರ್ಪು ಕಾಯ್ದಿರಿಸಿದ ವಾರಾಣಾಸಿ ಕೋರ್ಟ್ – ನಾಳೆ ತೀರ್ಪು ಸಂಭವ
ನಿಯಮಗಳ ಪ್ರಕಾರ ಸ್ವಾತಂತ್ರ್ಯದ ನಂತರ ಧಾರ್ಮಿಕ ಪ್ರದೇಶಗಳ ರಚನೆ ಧಕ್ಕೆ ತರಬಾರದು ಮತ್ತು ಅದು ಇರುವ ಸ್ಥಿತಿಯಲ್ಲಿ ಮುಂದುವರಿಸಬೇಕು. ಆದರೆ ನಿಯಮ ಬಾಹಿರವಾಗಿ ಸಿವಿಲ್ ಕೋರ್ಟ್ ವಿಡಿಯೋ ಸರ್ವೆಗೆ ಅನುಮತಿ ನೀಡಿದೆ. ಹೀಗಾಗಿ ವೀಡಿಯೋ ಸರ್ವೆಯನ್ನು ಪರಿಗಣಿಸಬಾರದು ಮತ್ತು ಪೂಜೆಗೆ ಅವಕಾಶ ಕಲ್ಪಿಸಬಾರದು ಎಂದು ವಾದ ಮಂಡಿಸಿದ್ದರು.
ಇದನ್ನೂ ಓದಿ :- ಮೇಕೆದಾಟು ಪಾದಯಾತ್ರೆಯಲ್ಲಿ ನಿಯಮ ಉಲ್ಲಂಘನೆ ಆರೋಪ – ನಾಳೆ ವಿಚಾರಣೆಗೆ ಹಾಜರಾಗುವಂತೆ ಸಿದ್ದರಾಮಯ್ಯಗೆ ಸಮನ್ಸ್