ಗುಂಡೇಟು ತಿಂದು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಜಪಾನ್ ನ ಮಾಜಿ ಪ್ರಧಾನಿ ಶಿಂಜೋ ಅಬೆ (62) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಜಪಾನ್ ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡಿದೆ. ನಾರಾ ನಗರದಲ್ಲಿ ಭಾಷಣ ಮಾಡುತ್ತಿರುವಾಗಲೇ ಶಿಂಜೋ ಅಬೆ( shinzo abe) ಗೆ ಹಿಂದಿನಿಂದ ವ್ಯಕ್ತಿಯೊಬ್ಬ ಶೂಟ್ ಮಾಡಿದ್ದ. ಭಾಷಣ ಮಾಡುತ್ತಿರುವಾಗ ಶಿಂಜೋ ಅಬೆ ಎದೆಗೆ ಗುಂಡು ತಾಗಿದ ಪರಿಣಾಮ ತೀವ್ರ ರಕ್ತಸ್ರಾವವಾಗಿತ್ತು. ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿತ್ತು. ಇದನ್ನೂ ಓದಿ : – ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಆರೋಗ್ಯ ಸ್ಥಿತಿ ಗಂಭೀರ
ಶಿಂಜೋ ಅಬೆ ಎರಡು ಬಾರಿ ಜಪಾನ್ ಪ್ರಧಾನಿಯಾಗಿದ್ದರು. ಜಪಾನ್ನ ದೀರ್ಘ ಕಾಲದ ಪ್ರಧಾನಿ ಎಂಬ ಹಿರಿಮೆಗೆ ಪಾತ್ರರಾಗಿದ್ದರು. ಜಪಾನ್ ಕಾಲಮಾನ ಬೆಳಗ್ಗೆ 11 ಗಂಟೆಗೆ ನಾರಾ ನಗರದಲ್ಲಿ ಭಾಷಣ ಮಾಡುತ್ತಿರುವಾಗ 2 ಬಾರಿ ಶೂಟ್ ಮಾಡಿ ಮಾಡಲಾಗಿತ್ತು.
ಶಿಂಜೊ ಅಬೆ ಹಂತಕ ಸೆರೆ
ಅಬೆಯನ್ನು ಕೊಲ್ಲುವುದು ನನ್ನ ಉದ್ದೇಶವಾಗಿತ್ತು ಎಂದು ಹಂತಕ 41 ವರ್ಷದ ಯಾಮಗಮಿ ಹೇಳಿಕೆ ನೀಡಿದ್ದಾನೆ.
ಇದನ್ನೂ ಓದಿ : – ಜಪಾನ್ ನ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ