State News

ಕನ್ನಡದ ಖ್ಯಾತ ಕಥೆಗಾರ, ಕವಿ ತಿರುಮಲೇಶ್ ನಿಧನ…!

ಕನ್ನಡದ ಖ್ಯಾತ ಕಥೆಗಾರ, ಕವಿ ವಿಮರ್ಶಕ ಕೆ.ವಿ. ತಿರುಮಲೇಶ್ ನಿಧನರಾಗಿದ್ದಾರೆ.

ಕನ್ನಡದ ಖ್ಯಾತ ಕಥೆಗಾರ, ಕವಿ ವಿಮರ್ಶಕ ಕೆ.ವಿ. ತಿರುಮಲೇಶ್ (THIRUMALESH) ನಿಧನರಾಗಿದ್ದಾರೆ. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ತಿರುಮಲೇಶ್(82) ಇಂದು ಮುಂಜಾನೆ ಹೈದರಾಬಾದಿನ ತಮ್ಮ ಮಗಳ ನಿವಾಸದಲ್ಲಿ ವಿಧಿವಶರಾಗಿದ್ದಾರೆ.

ಕನ್ನಡದ ಖ್ಯಾತ ಕತೆಗಾರ, ಕವಿ ತಿರುಮಲೇಶ್ ನಿಧನ

ಇತ್ತೀಚೆಗೆ ತಿರುಮಲೇಶ್ ಅವರಿಗೆ ಹೃದಯದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಕಳೆದ ವಾರದವರೆಗೂ ಆಸ್ಪತ್ರೆಯಲ್ಲಿದ್ದ ಅವರು ಭಾನುವಾರ ಡಿಸ್ಚಾರ್ಜ್ ಆಗಿ ಮನೆಗೆ ಬಂದಿದ್ದರು. ಪತ್ನಿ, ಮೂವರು ಹೆಣ್ಣು ಮಕ್ಕಳನ್ನು ತಿರುಮಲೇಶ್ ಅಗಲಿದ್ದಾರೆ. ಇದನ್ನು ಓದಿ :- ಇಂದು ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭ.. ರಾಹುಲ್ ಗಾಂಧಿ ನಡೆದು ಬಂದ ಹಾದಿ ಇಲ್ಲಿದೆ…

ಕನ್ನಡದ ಖ್ಯಾತ ಕತೆಗಾರ, ಕವಿ ತಿರುಮಲೇಶ್ ನಿಧನ | Public TV

ಕೇರಳ(KERALA)ದ ಕಾಸರಗೋಡು ಜಿಲ್ಲೆಯ ಕಾರಡ್ಕ ಗ್ರಾಮದಲ್ಲಿ 1940ರ ಸೆಪ್ಟೆಂಬರ್ 12ರಂದು ಜನಿಸಿದ ತಿರುಮಲೇಶ್ ಇವರು ಕನ್ನಡ ಭಾಷೆಯ ಬಹು ಮುಖ್ಯ ಕವಿ, ಕತೆಗಾರ, ಭಾಷಾ ವಿಜ್ಞಾನಿ, ವಿದ್ವಾಂಸ ಹಾಗೂ ವಿಮರ್ಶಕರಾಗಿ ಗುರುತಿಸಿಕೊಂಡಿದ್ದರು.

ಇದನ್ನು ಓದಿ :- ಭಾವನಾತ್ಮಕವಾಗಿ ಟ್ವೀಟ್ ಮಾಡಿ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಸೂರಜ್ ರೇವಣ್ಣ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!