ಸಿಎಂ ಬೊಮ್ಮಾಯಿ ನಗರ ಪ್ರದಕ್ಷಿಣೆಗೆ ಮಾಜಿ ಸಿಎಂ ಹೆಚ್ಡಿಕೆ ವ್ಯಂಗ್ಯ 

ಕಳೆದೆರಡು ಮೂರು ದಿನಗಳಿಂದ ಬೆಂಗಳೂರಲ್ಲಿ ಭಾರೀ ಮಳೆಯಾಗುತ್ತಿದ್ದು.ಬರೀ ಫೋಟೋ ತೆಗೆಸಿಕೊಳ್ಳೋಕೆ ಮಾತ್ರ ನಗರ ಪ್ರದಕ್ಷಿಣೆ ಮಾಡಬೇಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (KUMARASWAMY ) ಬಿಜೆಪಿ (BJP ) ನಾಯಕರ ಕಿವಿ ಹಿಂಡಿದ್ದಾರೆ.

ಬೆಂಗಳೂರಲ್ಲಿ ಮಳೆಯಿಂದ ಅವಾಂತರ ಸೃಷ್ಟಿ ಹಿನ್ನೆಲೆ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಿಎಂ ಕುಮಾರಸ್ವಾಮಿ, ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ದಾಖಲೆಯ ಮಳೆ ಸುರಿಯುತ್ತಿದೆ. ಮಳೆಯಿಂದ ಬಹಳಷ್ಟು ಹಾನಿಯಾಗಿದೆ. ದೊಡ್ಡ ಅನಾಹುತಗಳ ಬಗ್ಗೆ ಗಮನ ಸೆಳೆಯುವ ಬಗ್ಗೆ ಮಾಧ್ಯಮಗಳು ಶ್ರಮ ಹಾಕಿವೆ. ದುಡ್ಡನ್ನು ಹೊಡೆಯುವ ಶಾಸಕರಿಗೆ ಸರ್ಕಾರ ಹಣ ಕೊಟ್ಟಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನ ಸಚಿವರಿಗೆ ಕೊಡದೆ ಸಿಎಂ ಬಳಿ ಇಟ್ಟುಕೊಂಡಿದ್ದಾರೆ. ಬೆಂಗಳೂರಿನ ಜನ ನೀರಲ್ಲಿ ಮುಳುಗಿ ಸಾಯುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸಿಎಂ ಬೊಮ್ಮಾಯಿ ನಿನ್ನೆ ಆರ್ ಆರ್ ನಗರಕ್ಕೆ ಒಂದು ಕಡೆ ಮಾತ್ರ ಭೇಟಿ ಕೊಟ್ಟು, ಚಿಕ್ಕಮಗಳೂರಿನ ಶಾಸಕನ ಸರ್ಟಿಫಿಕೇಟ್ ಕೊಡೋಕೆ ಹೋಗಿದ್ರು. ಇವತ್ತು ಕಾಟಾಚಾರ ಪ್ರದಕ್ಷಿಣೆ ಮಾಡಿ ಜನರಿಂದ ಕದ್ದು ಮುಚ್ಚಿ ಬಂದಿದ್ದಾರೆ ಎಂದು ಎಚ್ ಡಿ ಕೆ ಆರೋಪಿಸಿದರು. ಇದನ್ನೂ ಓದಿ :-SSLC RESULT TOPPERS LIST – 625 ಕ್ಕೆ 625 ಅಂಕಗಳಿಸಿದವರ ಟಾಪರ್ಗಳ ಲಿಸ್ಟ್

ಇಷ್ಟೊಂದು ದೊಡ್ಡ ಮಟ್ಟದ ಮಳೆಯಾದರೂ ಶಾಸಕರು ಅಧಿಕಾರಿಗಳ ಸಭೆ ಕರೆದಿಲ್ಲ. ಅಧಿಕಾರಿಗಳ ಸಭೆ ಕರೆದು ಏನಾದರೂ ಸೂಚನೆ ಕೊಟ್ಟಿದ್ದಾರಾ..? ಬೆಂಗಳೂರು ಮಹಾನಗರದಲ್ಲಿ ಸಪ್ತ ಸಚಿವರಂತೆ ಏಳು ಸಚಿವರು ಇದ್ದಾರೆ. ಇಷ್ಟು ಜನ ಇಟ್ಟುಕೊಂಡು ನಗರದ ಜನತೆಗೆ ಏನು ಸಂದೇಶ ಕೊಡ್ತಿದ್ದಾರೆ? ಯಾವ ಯಾವ ಕ್ಷೇತ್ರಕ್ಕೆ ಎಷ್ಟೆಷ್ಟು ಅನುದಾನ ತಗೊಂಡು ಹೋದರು? ಆ ಹಣವನ್ನು ಯಾರಿಗೆ ಕೊಟ್ಟಿದ್ದಾರೆ..? ಬರೀ ಫೋಟೋ ತೆಗೆಸಿಕೊಳ್ಳೋಕೆ ನಗರ ಪ್ರದಕ್ಷಿಣೆ ಮಾಡಬೇಡಿ ಎಂದು ಸಿಎಂ ನಗರ ಪ್ರದಕ್ಷಿಣೆ ಬಗ್ಗೆ ಹೆಚ್‌ಡಿಕೆ ಕಿಡಿಕಾರಿದ್ದಾರೆ.

In K'taka HD Kumaraswamy plays emotional card to polarise votes!

ಕಂದಾಯ ಸಚಿವರ ಕ್ಷೇತ್ರದಲ್ಲಿ ಎಷ್ಟು ಕೆರೆ ನುಂಗಿ ಹಾಕಿದ್ದಾರೆ..? ಪುಟ್ಟೇನಹಳ್ಳಿ ಕೆರೆ ನಾಶಗೊಳಿಸಿ ಜೆಪಿ ನಗರ ಡಾಲರ್ಸ್ ಕಾಲೋನಿ ಅಂತಾ ಮಾಡಿಕೊಂಡರು. ಈ ಹಿಂದೆ ನಾನು ೧೪ ತಿಂಗಳು ಸಿಎಂ ಆಗಿದ್ದಾಗ ಇದನ್ನು ಸ್ವಚ್ಛ ಮಾಡುವ ಶಕ್ತಿ ಇರಲಿಲ್ಲ. ಯಾಕೆಂದರೆ ಆಗ ನನಗೆ ಅದರ ಸ್ವಾತಂತ್ರವೇ ಇರಲಿಲ್ಲ. ಆಗ ನಗರಾಭಿವೃದ್ಧಿ ಸಚಿವರು, ಉಪ ಮುಖ್ಯಮಂತ್ರಿ ಆದವರು ಅವರೇ ಸಭೆ ಕರೆಯಬೇಕಿತ್ತು. ನಾನು ಮುಖ್ಯಮಂತ್ರಿಯಾದರೂ ಕೂಡ ಸುಮ್ಮನೆ ಇರಬೇಕಿತ್ತು. ಬೆಂಗಳೂರಿಗೆ ಸಂಬಂಧಿಸಿದಂತೆ ಸಭೆ ಕರೆಯೋ ಹಾಗಿರಲಿಲ್ಲ ಎಂದು ಹೇಳಿದ್ರು. ಇದನ್ನೂ ಓದಿ : – ಜ್ಞಾನವಾಪಿ ಮಸೀದಿಯೊಳಗೆ ಇದೆಯಂತೆ ಶೇಷನಾಗನ ಶಿಲ್ಪಕಲೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!