ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕ ವಿ.ಎಸ್ ಪಾಟೀಲ್

ಯಲ್ಲಾಪುರ ಮಾಜಿ ಶಾಸಕರಾದ ವಿ.ಎಸ್ ಪಾಟೀಲ್ ಹಾಗೂ ಶ್ರೀನಿವಾಸ್ ಭಟ್ ಅವರು ಬಿಜೆಪಿ ತೊರೆದು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಯಲ್ಲಾಪುರ ಮಾಜಿ ಶಾಸಕರಾದ ವಿ.ಎಸ್ ಪಾಟೀಲ್ (VS.Patil) ಹಾಗೂ ಶ್ರೀನಿವಾಸ್ ಭಟ್ ಅವರು ಬಿಜೆಪಿ ತೊರೆದು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ (KPCC Office)  ಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ (Dk.shivakumar) , ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) , ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹಾಗೂ ಹಿರಿಯ ಮುಖಂಡ ಆರ್.ವಿ. ದೇಶಪಾಂಡೆ ಪಕ್ಷದ ಧ್ವಜ ನೀಡುವ ಮೂಲಕ ವಿ.ಎಸ್. ಪಾಟೀಲ್ ಹಾಗೂ ಶ್ರೀನಿವಾಸ್ ಭಟ್ ದಾತ್ರಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

ಈ ಸಂಧರ್ಭದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ‘ವಿ.ಎಸ್. ಪಾಟೀಲ್ ಅವರು ನಮ್ಮ ಜತೆ ವಿಧಾನಸಭೆಯಲ್ಲಿ ಕೆಲಸ ಮಾಡಿದ್ದಾರೆ. ಅಬ್ದುಲ್ ಕಲಾಂ ಅವರು ರಾಷ್ಟ್ರಪತಿ ಆಗಿದ್ದ ಸಂದರ್ಭದಲ್ಲಿ ಇವರಿಗೆ ಅತ್ಯುತ್ತಮ ಶಾಸಕ ಎಂಬ ಪ್ರಶಸ್ತಿ ನೀಡಿ, ಗೌರವಿಸಿದ್ದರು. ಅವರ ತಂದೆ ಕೂಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು.  ಇದನ್ನು ಓದಿ : –  ಅಸೆಂಬ್ಲಿ ಚುನಾವಣೆ ನಂತರವೇ ಬಿಬಿಎಂಪಿಗೆ ಚುನಾವಣೆ! ಸುಪ್ರೀಂ ಕೋರ್ಟ್ ಡೆಡ್ ಲೈನ್

ಇವರು ಕೂಡ ಪಕ್ಷದ ವಿವಿಧ ಸಂಘಟನೆಗಳಲ್ಲಿ ಕೆಲಸ ಮಾಡಿದ್ದರು. ಈ ಮಧ್ಯೆ ಬಿಜೆಪಿ ಸೇರಿ, ಸ್ಪರ್ಧಿಸಿದ್ದರು. ಆಪರೇಷನ್ ಕಮಲದಲ್ಲಿ ನಮ್ಮ ಶಾಸಕರು ಹೋದ ನಂತರ ಆಯಾ ಕ್ಷೇತ್ರದ ಬಹುತೇಕ ಬಿಜೆಪಿ ನಾಯಕರು ನಮ್ಮ ಪಕ್ಷಕ್ಕೆ ಒಬ್ಬೊಬ್ಬರಾಗಿ ಬರುತ್ತಿದ್ದಾರೆ ಎಂದು ಹೇಳಿದ್ರು. ಇವರು ನಮ್ಮ ಪಕ್ಷದ ಸಿದ್ಧಾಂತ, ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವ ಒಪ್ಪಿ ಪಕ್ಷಕ್ಕೆ ಬಂದಿದ್ದಾರೆ ಎಂದು ಸ್ಪಷ್ಟಪಡಿಸಿದ್ರು.

ಇದನ್ನು ಓದಿ : –  RV ದೇಶಪಾಂಡೆಗೆ ವಯಸ್ಸಾಯ್ತು…! ಡಿಕೆ ಶಿವಕುಮಾರ್ ಎದುರು ಮುಜುಗರಕ್ಕೀಡಾದ ಹಿರಿಯ ನಾಯಕ!

 

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!