Crime News

ಮಹದಾಯಿ ವಿವಾದ-ಕಾನೂನು, ರಾಜಕೀಯ ಯಾವುದೇ ಮಾರ್ಗದಲ್ಲಿ ಹೋರಾಡಲು ನಾವು ಸಿದ್ಧ ಗೋವಾ ಸಿಎಂ

ಯಾರು ಏನೇ ಹೇಳಲಿ, ಮಹದಾಯಿಗಾಗಿ ಯಾವುದೇ ಮಾರ್ಗದಲ್ಲಿಯಾದರೂ ಹೋರಾಡಲು ನಾವು ಸಿದ್ಧ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್ ಹೇಳಿದ್ದಾರೆ.

ಯಾರು ಏನೇ ಹೇಳಲಿ, ಮಹದಾಯಿ (Mahadayi) ಗಾಗಿ ಯಾವುದೇ ಮಾರ್ಗದಲ್ಲಿಯಾದರೂ ಹೋರಾಡಲು ನಾವು ಸಿದ್ಧ ಎಂದು ಗೋವಾ (Goa) ಮುಖ್ಯಮಂತ್ರಿ ಪ್ರಮೋದ್‌ ಸಾವಂತ್ (Pramod sawant) ಹೇಳಿದ್ದಾರೆ. ಯಾರು ಏನೇ ಹೇಳಲಿ, ನಮ್ಮ ನಿರ್ಧಾರದಲ್ಲಿ ನಾವು ದೃಢವಾಗಿದ್ದೇವೆ.

Mahadayi: Goa's plaint now irrelevant: Karnataka | Deccan Herald

ಮಹದಾಯಿಗಾಗಿ ಕಾನೂನಾತ್ಮಕವಾಗಿ, ರಾಜಕೀಯವಾಗಿ ಮತ್ತು ತಾಂತ್ರಿಕವಾಗಿ ಏನು ಮಾಡಬೇಕೋ ಅದನ್ನು ನಾವು ಮಾಡುತ್ತೇವೆ. ನಾವು ಕೈಗೊಳ್ಳಬೇಕಾದ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆಂದು ಹೇಳಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಮಹದಾಯಿ ಯೋಜನೆ ಕುರಿತು ಹೇಳಿಕೆ ನೀಡಿದ್ದ ಸಿಎಂ ಬೊಮ್ಮಾಯಿ (Bommai) ಯವರು, ಕಳಸಾ ಬಂಡೂರಿ ವಿಷಯದಲ್ಲಿ ಗೋವಾ ಸರಕಾರ ತೆಗೆದುಕೊಂಡಿರುವ ನಿರ್ಣಯಕ್ಕೆ ಕವಡೆ ಕಾಸಿನ ಕಿಮ್ಮತ್ತೂ ಇಲ್ಲ. ಈಗಾಗಲೇ ಯೋಜನೆ (Scheme) ಯ ಸಮಗ್ರ ಪರಿಷ್ಕೃತ ವರದಿ ಗೆ ಅನುಮೋದನೆ ಸಿಕ್ಕಿದೆ. ಅರಣ್ಯ ಇಲಾಖೆಯ ಒಪ್ಪಿಗೆ ಸಿಕ್ಕ ತಕ್ಷಣ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಹೇಳಿದ್ದರು.

ಇದನ್ನು ಓದಿ :- ಬಿಜೆಪಿಯವರು ವಿಧಾನಸೌಧವನ್ನ ಹಣ ಸ್ವೀಕರಿಸುವುದಕ್ಕೆ ಇಟ್ಟುಕೊಂಡಿದ್ದಾರೆ – ಸುರ್ಜೇವಾಲಾ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!