ಮಹಾರಾಷ್ಟ್ರ( maharastra ) ದ ಗೊಂಡಿಯಾದಲ್ಲಿ ರೈಲಿನ 3 ಬೋಗಿಗಳು ಹಳಿತಪ್ಪಿದ ಪರಿಣಾಮ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದುವರೆಗೆ ಸಿಕ್ಕಿರುವ ಮಾಹಿತಿ ಪ್ರಕಾರ ಇಂದು ಬೆಳಗಿನ ಜಾವ 2.30ರ ಸುಮಾರಿಗೆ ಈ ರೈಲು ಅಪಘಾತ ಸಂಭವಿಸಿದೆ.
ಈ ಎಲ್ಲಾ 50 ಗಾಯಾಳುಗಳ ಪೈಕಿ 49 ಮಂದಿಯನ್ನು ಪ್ರಥಮ ಚಿಕಿತ್ಸೆಯ ನಂತರ ಡಿಸ್ಚಾರ್ಜ್ ಮಾಡಲಾಗಿದೆ. ಈ ಅಪಘಾತದಲ್ಲಿ ಒಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ ಎಂದು ಹೇಳಲಾಗಿದೆ. ಆದರೆ, ಯಾವುದೇ ಪ್ರಯಾಣಿಕರು ಸಾವನ್ನಪ್ಪಿಲ್ಲ. ವರದಿಗಳ ಪ್ರಕಾರ, ರೈಲು ಛತ್ತೀಸ್ ಘಢದ ಬಿಲಾಸ್ ಪುರದಿಂದ ರಾಜಸ್ಥಾನದ ಜೋಧಪುರಕ್ಕೆ ಹೋಗುತ್ತಿತ್ತು. ಇದನ್ನೂ ಓದಿ : – ಕಾಂಗ್ರೆಸ್ ನಲ್ಲಿ ಬಂಡಾಯ – ಹಲವು ಸಮಿತಿಗಳ ಹಿರಿಯ ನಾಯಕ ಗುಲಾಂ ನಬಿ ಆಜಾದ್ ರಾಜೀನಾಮೆ
ಗೂಡ್ಸ್ ರೈಲು ಮತ್ತು ಪ್ಯಾಸೆಂಜರ್ ರೈಲಿನ ನಡುವೆ ಡಿಕ್ಕಿಯಾಗಿ ಮತ್ತು ಸಿಗ್ನ ಲಿಂಗ್ ಸಮಸ್ಯೆಯಿಂದಾಗಿ ಈ ಅಪಘಾತ ಸಂಭವಿಸಿದೆ. ಚಾಲಕ ತುರ್ತು ಬ್ರೇಕ್ ಹಾಕಿದರೂ ಗೂಡ್ಸ್ ರೈಲಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಸಾಧ್ಯವಾಗಲಿಲ್ಲ.
ಇದನ್ನೂ ಓದಿ : – ಸಹಜ ಸ್ಥಿತಿಯತ್ತ ಶಿವಮೊಗ್ಗ- ಇಂದಿನಿಂದ ಶಾಲಾ-ಕಾಲೇಜು ಓಪನ್