ರಾಜ್ಯದ ಎಲ್ಲಾ ಶಾಲೆ (SCHOOLS) ಗಳು ಮತ್ತು ಪದವಿ ಪೂರ್ವ ಕಾಲೇಜು (COLLEGE) ಗಳಲ್ಲಿ ವಿದ್ಯಾರ್ಥಿಗಳು ಪ್ರತಿದಿನ ಬೆಳಗ್ಗೆ ಸಾಮೂಹಿಕ ಪ್ರಾರ್ಥನೆಯ ವೇಳೆ ರಾಷ್ಟ್ರಗೀತೆ (NATIONAL ANTHEM) ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ (kARNATAKA GOVERNMENT) ಆದೇಶ ಹೊರಡಿಸಿದೆ.
ಆಗಸ್ಟ್ 17 ರ ಈ ಆದೇಶವು ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಅನ್ವಯಿಸುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತನ್ನ ಆದೇಶದಲ್ಲಿ ತಿಳಿಸಿದೆ. ಆದೇಶದ ಪ್ರಕಾರ, ಈ ಬಗ್ಗೆ ಸರ್ಕಾರದ ಆದೇಶ ಜಾರಿಯಲ್ಲಿದ್ದರೂ, ಬೆಂಗಳೂರಿನ ಕೆಲವು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಬೆಳಗ್ಗೆ ಪ್ರಾರ್ಥನೆಯ ಸಮಯದಲ್ಲಿ ರಾಷ್ಟ್ರಗೀತೆಯ ಸಾಮೂಹಿಕ ಗಾಯನ ಮಾಡುತ್ತಿಲ್ಲ ಎಂಬ ಬಗ್ಗೆ ಸರ್ಕಾರಕ್ಕೆ ದೂರುಗಳು ಬಂದಿವೆ.ದೂರುಗಳ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಬೆಂಗಳೂರು ಉತ್ತರ ಮತ್ತು ದಕ್ಷಿಣ ವಿಭಾಗದ ಉಪನಿರ್ದೇಶಕರು ಸಂಬಂಧಪಟ್ಟ ಶಾಲೆಗಳಿಗೆ ಭೇಟಿ ನೀಡಿ ಬೆಳಗ್ಗೆ ಪ್ರಾರ್ಥನೆಯಲ್ಲಿ ರಾಷ್ಟ್ರಗೀತೆ ಹಾಡುವ ಕಾರ್ಯ ನಡೆಯುತ್ತಿಲ್ಲ ಎಂದು ಖಚಿತಪಡಿಸಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ : – ಇನ್ಮುಂದೆ UPI ಫೋನ್ ಪೇ, ಗೂಗಲ್ ಪೇ, ಭೀಮ್ ವಹಿವಾಟು ದುಬಾರಿ..! ಶುಲ್ಕ ವಿಧಿಸಲು RBI ಚಿಂತನೆ
ಕರ್ನಾಟಕ ಶಿಕ್ಷಣ ಕಾಯ್ದೆ 1983ರ ಪ್ರಕಾರ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯ. ಕೆಲವು ಶಾಲೆಗಳಲ್ಲಿ ನಿಯಮ ಉಲ್ಲಂಘಿಸಲಾಗುತ್ತಿದೆ ಎಂಬ ದೂರುಗಳು ಬಂದಿವೆ. ಅದಕ್ಕೆ ಅವಕಾಶ ನೀಡಬಾರದು ಎಂದು ತಾಕೀತು ಮಾಡಲಾಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಮೈದಾನದ ಕೊರತೆ ಇದ್ದರೆ, ಕೊಠಡಿಗಳಲ್ಲೇ ರಾಷ್ಟ್ರಗೀತೆ ಹಾಡಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಇದನ್ನೂ ಓದಿ : – ಮುಂಬೈ ದಾಳಿ ಮಾದರಿ ಉಗ್ರದಾಳಿಗೆ ಸಂಚು? ಮಹಾರಾಷ್ಟ್ರದ ಬೀಚ್ ಬಳಿ ಸ್ಫೋಟಕ, ಬಂದೂಕುಗಳಿದ್ದ ಶಂಕಿತ ದೋಣಿ ಪತ್ತೆ