ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಪ್ರಕಾರ 4 ಮತ್ತು 5 ನೇ ತರಗತಿಯ ವಿದ್ಯಾರ್ಥಿಗಳಿಗೆ ಹೋಂವರ್ಕ್’ನ್ನು ಹಗುರಗೊಳಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಗುರುವಾರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿರುವ ಅವರು 3ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಯಾವುದೇ ಹೋಂವರ್ಕ್’ನ್ನು ಸರ್ಕಾರ ಅನುಮತಿಸುವುದಿಲ್ಲ, ಆದರೆ, 4 ಮತ್ತು 5ನೇ ತರಗತಿಯ ವಿದ್ಯಾರ್ಥಿಗಳಿಗೆ ಹೋಂವರ್ಕ್ ಹಗುರಗೊಳಿಸಲಾಗುತ್ತದೆ ಎಂದು ಹೇಳಿದ್ದಾರೆ. ಇದನ್ನು ಓದಿ :- ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಕೈ ಹಾಕಿದವರು ಇನ್ನೊಮ್ಮೆ ಹೀಗೆ ಮಾಡಲು ಆಗದಂತೆ ಮುಟ್ಟಿ ನೋಡಿಕೊಳ್ಳಬೇಕು ಹಾಗೆ ಮಾಡುತ್ತೇನೆ – ಆರಗ ಜ್ಞಾನೇಂದ್ರ
ಇದೇ ವೇಳೆ ಮೇ ಎರಡನೇ ಅಥವಾ ಮೂರನೇ ವಾರದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಬರಲಿದೆ ಎಂದು ತಿಳಿಸಿದ್ದಾರೆ. ಸ್ಟಾಕ್ ಹೋಲ್ಡರ್ಸ್ ಗಳು ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶಾಲಾಸಮವಸ್ತ್ರಕ್ಕೆ ವಿಧಿಸುತ್ತಿರುವ ವೆಚ್ಚ ಭಾರೀ ಮೊತ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಸಮವಸ್ತ್ರಕ್ಕೆ ಮರು ಟೆಂಡರ್ ಕರೆಯಲಾಗುತ್ತದೆ ಎಂದಿದ್ದಾರೆ.
ಕೋವಿಡ್ ಸಾಂಕ್ರಾಮಿಕ ರೋಗ ಪರಿಸ್ಥಿತಿಯಿಂದಾಗಿ ಉಳಿದಿರುವ ಸ್ಟಾಕ್ ಗಳನ್ನು ಕಡಿಮೆ ಬೆಲೆಗೆ ನೀಡಲು ಬಯಸಿದ್ದರು. ಆದರೆ, ಇದೀಗ ಡೀಸೆಲ್ ದರ ಹೆಚ್ಚಳದಿಂದ ಸಾರಿಗೆ ವೆಚ್ಚ ಹೆಚ್ಚಾಗಿದ್ದು, ಇದನ್ನು ಪರಿಗಣಿಸಿ ಹೆಚ್ಚಿನ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ಸಮವಸ್ತ್ರ ಸಂಬಂಧ ಇರುವ ಟೆಂಡರ್ ಪ್ರಕ್ರಿಯೆಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುತ್ತದೆ ಎಂದು ನಾಗೇಶ್ ಅವರು ತಿಳಿಸಿದ್ದಾರೆ.
ಇದನ್ನು ಓದಿ :- ರೇಪ್ ಬಗ್ಗೆ ವಿವಾದಾತ್ಮಕ ಹೇಳಿಕೆ – ಆಂಧ್ರ ಗೃಹ ಸಚಿವೆ ತನೇತಿ ವನಿತಾ ವಿರುದ್ಧ ಆಕ್ರೋಶ