ಸಮಂತಾ ( SAMANTHA ) ಮಯೋಸಿಟಿಸ್ ಎಂಬ ಸ್ನಾಯು ಸಮಸ್ಯೆಯಿಂದ ಬಳಲುತ್ತಿರುವುದು ಗೊತ್ತೇ ಇದೆ. ಈ ವಿಷಯವನ್ನು ನಟಿ ಸಾಮಾಜಿಕ ಜಾಲತಾಣದ ಮೂಲಕ ಪ್ರಕಟಿಸಿದ್ದಾರೆ.
ಈ ಕಾರಣದಿಂದಾಗಿ ಅವರ ಆರೋಗ್ಯ ಸಮಸ್ಯೆಯ ಬಗ್ಗೆ ವಿವಿಧ ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಇತ್ತೀಚೆಗಷ್ಟೇ ಸಮಂತಾ ಆರೋಗ್ಯ ಹದಗೆಟ್ಟಿದೆ ಎಂಬ ಮತ್ತೊಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಮಂತಾ ಮನೆಯವರು ಏನೂ ಆಗಿಲ್ಲ. ಸಮಂತಾ ಚೆನ್ನಾಗಿದ್ದಾರೆ ಎನ್ನುತ್ತಿದ್ದಾರೆ. ಆಕೆಯ ಆರೋಗ್ಯದ ಕುರಿತಾದ ಸುದ್ದಿ ಕೇವಲ ವದಂತಿಯಾಗಿದೆ. ಸಮಂತಾ ಮಯೋಸಿಟಿಸ್ಗಾಗಿ ಅಮೆರಿಕಕ್ಕೆ ಹೋಗಿದ್ದರು. ಇದನ್ನೂ ಓದಿ : – ರಾಜಕೀಯ ಪ್ರೇರಿತವಾಗಿ ನನ್ನನ್ನು ಜೈಲಿಗೆ ಕಳಿಸಲಾಗಿತ್ತು – ಬಿಜೆಪಿಗೆ ತಿರುಗೇಟು ನೀಡಿದ ಡಿಕೆಶಿ
ಅಲ್ಲಿ ಆಕೆಗೆ ಚಿಕಿತ್ಸೆ ನೀಡಲಾಯಿತು ಎಂದು ತಿಳಿದುಬಂದಿದೆ. ಅದರ ನಂತರ ಸಮಂತಾ ಭಾರತದಲ್ಲಿಯೂ ಅದೇ ಚಿಕಿತ್ಸೆಯನ್ನು ಮುಂದುವರೆಸಿದರು. ಆದರೆ ಆಂಗ್ಲ ಔಷಧದಿಂದ ರೋಗ ವಾಸಿಯಾಗದ ಕಾರಣ ಸಮಂತಾ ಚಿಕಿತ್ಸೆಗಾಗಿ ಕೇರಳಕ್ಕೆ ತೆರಳಿದ್ದರು ಎಂಬ ಸುದ್ದಿಯೂ ಹೊರಬಿದ್ದಿದೆ. ಅಲ್ಲಿ ಆಕೆ ಆಯುರ್ವೇದ ಚಿಕಿತ್ಸೆ ತೆಗೆದುಕೊಳ್ಳುತ್ತಾರೆ ಎಂದು ತಿಳಿದುಬಂದಿದೆ.
ಆದರೆ ಇತ್ತೀಚೆಗೆ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೊಮ್ಮೆ ಸಮಂತಾ ಆರೋಗ್ಯ ಸ್ಥಿತಿ ಹದಗೆಟ್ಟಿದೆ ಎಂದು ವರದಿಯಾಗಿದೆ. ಆಕೆಯ ಸ್ಥಿತಿ ಹದಗೆಟ್ಟಿದ್ದು, ಉತ್ತಮ ಚಿಕಿತ್ಸೆಗಾಗಿ ದಕ್ಷಿಣ ಕೊರಿಯಾ ( DAKSHINA KORIYA ) ಕ್ಕೆ ರವಾನಿಸಲಾಗಿದೆ ಎಂದು ಹೇಳಲಾಗಿದೆ. ಸಮಂತಾ ಅವರ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದೆ, ಆದ್ದರಿಂದ ಅವರನ್ನು ದಕ್ಷಿಣ ಕೊರಿಯಾಕ್ಕೆ ಸ್ಥಳಾಂತರಿಸಲಾಗಿದೆ ಅಲ್ಲಿ ಉತ್ತಮ ಚಿಕಿತ್ಸೆ ಲಭ್ಯವಿರುತ್ತದೆ ಎಂದು ವರದಿಯಾಗಿದೆ.
ಇದನ್ನೂ ಓದಿ : – ವಿಜಯ್ ಹಜಾರೆ ಟ್ರೋಫಿ – ಸೆಮೀಸ್ ಗೆ ಕರ್ನಾಟಕ ಲಗ್ಗೆ