ಸುಪ್ರೀಂ ನಲ್ಲಿ ನಾಳೆ ವಿಚಾರಣೆ – ರಾಜ್ಯದ ಪರ ಸಮರ್ಥ ವಾದ ನಡೆಸುವ ಭರವಸೆಯಿದೆ- ಸಿಎಂ ಬೊಮ್ಮಾಯಿ

ಕರ್ನಾಟಕ - ಮಹಾರಾಷ್ಟ್ರ  ( KARANATAKA- MAHARASTRA ) ಗಡಿ ವಿವಾದ ಪ್ರಕರಣ ನಾಳೆ ಸುಪ್ರೀಂಕೋರ್ಟ್ ( SUPREM COURT ) ನಲ್ಲಿ ವಿಚಾರಣೆಗೆ ಬರಲಿದ್ದು,

ಕರ್ನಾಟಕ – ಮಹಾರಾಷ್ಟ್ರ  ( KARANATAKA- MAHARASTRA ) ಗಡಿ ವಿವಾದ ಪ್ರಕರಣ ನಾಳೆ ಸುಪ್ರೀಂಕೋರ್ಟ್ ( SUPREM COURT ) ನಲ್ಲಿ ವಿಚಾರಣೆಗೆ ಬರಲಿದ್ದು, ಈ ಕುರಿತು ಹಿರಿಯ ವಕೀಲ ಮುಕುಲ್ ರೋಹಟಗಿ, ಕರ್ನಾಟಕದ ಪರವಾಗಿ ಸಮರ್ಥವಾಗಿ ವಾದ ಮಾಡುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( BASAVARAJ BOMMAI ) ಹೇಳಿದ್ದಾರೆ.

Karnataka-Maharashtra border dispute Explained: What is Belagavi border dispute between Karnataka and Maharashtra | India News - Times of India ನವದೆಹಲಿಯಲ್ಲಿಂದು ಹಿರಿಯ ವಕೀಲ ಮುಕುಲ್ ರೋಹಟಗಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮುಕುಲ್ ರೋಹಟಗಿ ಹಿರಿಯ ವಕೀಲರಾಗಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಸಂಬಂಧಪಟ್ಟ ಹಾಗೆ ಈಗಾಗಲೇ ಎಲ್ಲ ವಿಷಯವನ್ನು ನಮ್ಮ ಅಡ್ವೋಕೇಟ್ ಜನರಲ್ ವಿವರಿಸಿದ್ದಾರೆ. ಗಡಿ ವಿವಾದದ ಕಾನೂನಾತ್ಮಕ ಹಿನ್ನೆಲೆ ಬಗ್ಗೆ ರೋಹಟಗಿ ಅವರಿಗೆ ವಿವರಣೆ ನೀಡಿದ್ದೇನೆ. ನಾಳೆ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡನೆ ಮಾಡಲು ಎಲ್ಲಾ ರೀತಿಯ ಸಿದ್ಧತೆ ನಡೆದಿದೆ ಎಂದು ಅವರು ತಿಳಿಸಿರುವುದಾಗಿ ಹೇಳಿದರು.

Supreme Court: Latest news, Updates, Photos, Videos and more.

ಕರ್ನಾಟಕಕ್ಕೆ ಸೇರಲು ನಿಯಮಗಳಿವೆ. 

ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರಿರುವ ಮಹಾರಾಷ್ಟ್ರದ ಕೆಲವು ಗ್ರಾಮಸ್ಥರು ಕರ್ನಾಟಕಕ್ಕೆ ಸೇರಲು ನಿರ್ಧರಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಹಳ್ಳಿಗಳು ಸೇರ್ಪಡೆಯಾಗಲು ನಿಯಮಗಳಿವೆ. ಜತ್ ತಾಲೂಕಿನ 42 ಗ್ರಾಮಸ್ಥರು ಸಿಎಂ ಭೇಟಿಗೆ ಅವಕಾಶ ಕೇಳಿರುವ ಬಗ್ಗೆ ಉತ್ತರಿಸಿ ಈ ಸಮಸ್ಯೆ ಇಂದು ನಿನ್ನೆಯದಲ್ಲ. ಸರಿಯಾದ ಸೌಲಭ್ಯ ದೊರಕದ ಹಿನ್ನಲೆಯಲ್ಲಿ ಅವರು ಈ ಹೇಳಿಕೆ ಬಹಳಷ್ಟು ವರ್ಷದಿಂದ ನೀಡುತ್ತಿದ್ದಾರೆ. ಆದರೆ ವಿಚಾರ ಸುಪ್ರೀಂಕೋರ್ಟ್ ನಲ್ಲಿದ್ದು, ಸರ್ವ ಪಕ್ಷ ಸಭೆ ಕರೆದು ಚರ್ಚೆ ಮಾಡಲಾಗುವುದು. ಕಾನೂನು ಸಲಹೆ ಪಡೆದು ಮುಂದುವರೆಯುವುದಾಗಿ ತಿಳಿಸಿದರು.

ಇದನ್ನೂ ಓದಿ : –  ರಾಜಕೀಯ ಪ್ರೇರಿತವಾಗಿ ನನ್ನನ್ನು ಜೈಲಿಗೆ ಕಳಿಸಲಾಗಿತ್ತು – ಬಿಜೆಪಿಗೆ ತಿರುಗೇಟು ನೀಡಿದ ಡಿಕೆಶಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!