ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಹೈಡ್ರಾಮ – ಸಂಸದ ವೇಣುಗೋಪಾಲ್ ಅಸ್ವಸ್ಥ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಇಡಿ ವಿಚಾರಣೆ ನಡೆಸುತ್ತಿದ್ದು, ಇದೇ ವೇಳೆ ಅವರನ್ನು ಬೆಂಬಲಿಸಿ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ್ದ ಪ್ರತಿಭಟನೆ ವೇಳೆ ಹೈಡ್ರಾಮಾವೇ ನಡೆದಿದೆ. ಇಡಿ ಕಚೇರಿ ಹೊರಗೆ ಇದ್ದ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ದೆ ಬೆಂಬಲ ಸೂಚಿಸಲು ಎಐಸಿಸಿ ಕಚೇರಿಯಿಂದ ಇಡಿ ಕಚೇರಿವರೆಗೂ ಪಾದಯಾತ್ರೆ ಮಾಡಿದರು. ಈ ವೇಳೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.


ಸಂಸದ ಕೆಸಿ ವೇಣುಗೋಪಾಲ್ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಈ ವೇಳೆ ನಡೆದ ಘರ್ಷಣೆಯಲ್ಲಿ ಕೆ.ಸಿ.ವೇಣುಗೋಪಾಲ್ ಅವರ ಶರ್ಟ್ ಹರಿದಿದೆ. ಹರಿದ ಶರ್ಟ್ ಸಮೇತವೇ ಪೊಲೀಸರು ಅವರನ್ನು ವಶಕ್ಕೆ ಪಡೆದು ತುಘಲಕ್ ರಸ್ತೆ ಪೊಲೀಸ್ ಠಾಣೆಗೆ ರವಾನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ವೇಣುಗೋಪಾಲ್ ಕೆಲಕಾಲ ಅಸ್ವಸ್ಥರಾಗಿದ್ದರು ಎಂದು ಹೇಳಲಾಗಿದೆ.

ಇದನ್ನೂ ಓದಿ : –  ನ್ಯಾಷನಲ್ ಹೆರಾಲ್ಡ್ ಪ್ರಕರಣ- ಭೋಜನ ವಿರಾಮದ ಬಳಿಕ ರಾಹುಲ್ ವಿಚಾರಣೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!