ನಾನು ಯಾವುದೇ ತಪ್ಪು ಮಾಡಿಲ್ಲ, ನಾನ್ಯಾಕೆ ರಾಜೀನಾಮೆ ನೀಡಲಿ, ಪ್ರಕರಣ ಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲಿದೆ, ಕೋರ್ಟ್ ತೀರ್ಪು ಹೊರಬರಲಿ ಎಂದು ಪ್ರತಿಪಕ್ಷ ಕಾಂಗ್ರೆಸ್ ನಾಯಕರ ಆರೋಪಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ (Eshwarappa) ಪ್ರತಿಕ್ರಿಯೆ ನೀಡಿದ್ದಾರೆ.
ಸಂತೋಷ್ ಪಾಟೀಲ್ (Santhosh Patil) ತಪ್ಪು ಮಾಡಿದ್ದು, ನಾನು ಯಾವುದೇ ತಪ್ಪು ಮಾಡಿಲ್ಲ, ದೆಹಲಿಯಲ್ಲಿ ಡಿ.ಕೆ ಸುರೇಶ್, ಹನುಮಂತಯ್ಯ ಅವರನ್ನು ಸಂತೋಷ್ ಭೇಟಿ ಮಾಡಿ ಸುದ್ದಿಗೋಷ್ಠಿ ನಡೆಸಿದ್ದರು. ಆ ಕಾಪಿಯನ್ನು ನಾನು ತೆಗೆದುಕೊಂಡು ಗುತ್ತಿಗೆದಾರ ಸಂತೋಷ್ ವಿರುದ್ಧ ಕೋರ್ಟ್ನಿಲ್ಲಿ ಮಾನನಷ್ಟ ಕೇಸ್ ಹಾಕಿದ್ದೇನೆ ಎಂದು ತಿಳಿಸಿದ್ರು. ಇದನ್ನುಓದಿ – ಸಂತೋಷ್ ಸೂಸೈಡ್ ಕೇಸ್ – ಮೊದಲು ಈಶ್ವರಪ್ಪನನ್ನ ಬಂಧಿಸಿ – ಸಿದ್ದರಾಮಯ್ಯ, ಡಿಕೆಶಿ ಆಗ್ರಹ
ಕೋರ್ಟ್ ನೋಟಿಸ್ ಹೋದ ನಂತರ ಭೀತಿಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು. ನೋಟಿಸ್ ಹೋದ ನಂತರ ಗಾಬರಿಯಾಗಿದ್ದಾರೆ ಅನಿಸುತ್ತೆ. ಸಂತೋಷ್ ಆತ್ಮಹತ್ಯೆಗೂ, ನನಗೂ ಏನೂ ಸಂಬಂಧವಿಲ್ಲ. ಸಂತೋಷ್ ಅವರನ್ನು ನಾನು ನೋಡಿಲ್ಲ. ಅವರು ಯಾರೂ ಎಂದೇ ನನಗೆ ಗೊತ್ತಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ.
ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಬಹಿರಂಗವಾಗುತ್ತಿದ್ದಂತೆ ಅವರು ವಾಟ್ಸಾಪ್ ನಲ್ಲಿ ಕಳುಹಿಸಿದ್ದ ಸಂದೇಶ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ.
ಅದರಲ್ಲಿ ನನ್ನ ಆತ್ಮಹತ್ಯೆಗೆ ಸಚಿವ ಈಶ್ವರಪ್ಪನವರೇ ಕಾರಣ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ.