ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗಿದ್ದು, ಮುಂದಿನ 2-3 ದಿನಗಳಲ್ಲಿ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಸಿಎಂ ಬೊಮ್ಮಾಯಿ (BOMMAI ) ತಿಳಿಸಿದ್ದಾರೆ.
ಗೃಹ ಸಚಿವ ಅಮಿತ್ ಶಾ(AMIT SHAH ) ಭೇಟಿಯ ನಂತರ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆಯೂ ಚರ್ಚೆಯಾಗಿದೆ. ಸಂಪುಟ ವಿಸ್ತರಣೆ ಬಗ್ಗೆಯೂ ಚರ್ಚೆ ಮಾಡಿದ್ದು, ಜೆಪಿ ನಡ್ಡಾ ಅವರ ಜೊತೆಗೂ ಮಾತನಾಡುತ್ತೇನೆ ಎಂದು ಅಮಿತ್ ಶಾ ತಿಳಿಸಿದ್ದಾರೆ ಎಂದು ಹೇಳಿದ್ರು. ಇದನ್ನೂ ಓದಿ : – ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯೋದಕ್ಕೂ ಶಿಕ್ಷಣ ಇಲಾಖೆಯಲ್ಲಿ ನಡೆಯೋದಕ್ಕು ವ್ಯತ್ಯಾಸ ಇದೆ – ಬಸವರಾಜ್ ರಾಯರೆಡ್ಡಿ
ನಾನು ಯಾವುದೇ ಹೆಸರುಗಳನ್ನು ಅಮಿತ್ ಶಾ ಅವರಿಗೆ ಹೇಳಿಲ್ಲ. ಮುಂದಿನ ವಾರ ಬಹಳ ಮುಖ್ಯವಾಗಿದೆ. ಯಾಕೆಂದರೆ ಸ್ಥಳೀಯ ಚುನಾವಣೆಯ ಬಗ್ಗೆ ಚರ್ಚೆ ನಡೆಯುತ್ತಿದೆ. ನಮ್ಮ ರಾಜ್ಯದ ರಾಜಕೀಯ ಸ್ಥಿತಿಗತಿ ಆಧಾರ ಬಗ್ಗೆ ಬದಲಾವಣೆ ಆಗಬಹುದು. ಬರುವ ಮೂರು ನಾಲ್ಕು ದಿನಗಳಲ್ಲಿ ನಿರ್ಧಾರವಾಗಲಿದೆ ಎಂದು ಮಾಹಿತಿ ನೀಡಿದ್ರು.
ಇದನ್ನೂ ಓದಿ : – PSI ಹುದ್ದೆ ಕೊಡಿಸುವುದಾಗಿ ಲಕ್ಷ ಲಕ್ಷ ವಸೂಲಿ ಮಾಡಿ ವಂಚಿಸಿದ ಕಿರಾತಕನ ಬಂಧನ