ವೈದ್ಯರ ಸಲಹೆ ಮೇರೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒಂದು ವಾರದ ಕಾಲ ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು ಕನಿಷ್ಟ ಒಂದು ವಾರದ ವರೆಗೂ ನಾನು ಯಾರನ್ನು ಭೇಟಿ ಮಾಡುವುದು ಅಥವಾ ಹೆಚ್ಚು ಮಾತನಾಡುವುದು ಮಾಡಬಾರದು ಎಂದು ವೈದ್ಯರು ಸಲಹೆ ಮಾಡಿದ್ದಾರೆ.
ಈ ಕಾರಣಕ್ಕೆ ವಿಶ್ರಾಂತಿ ಪಡೆಯುತ್ತಿದ್ದೇನೆ. ಈ ಸಂದರ್ಭದಲ್ಲಿ ನಾನು ಸಾರ್ವಜನಿಕರ ಭೇಟಿಗೆ ಲಭ್ಯ ಇರುವುದಿಲ್ಲ. ಹೀಗಾಗಿ ಬಿಡದಿ ತೋಟಕ್ಕೆ ಅಥವಾ ಪಕ್ಷದ ಕಚೇರಿಗೆ ನನ್ನ ಭೇಟಿಗೆ ಯಾರೂ ಬರಬಾರದಾಗಿ ಮನವಿ ಮಾಡುತ್ತೇನೆ. ಸಾರ್ವಜನಿಕರು ಅನ್ಯತಾ ಭಾವಿಸಬಾರದು. ವಾರದ ನಂತರ ಎಂದಿನಂತೆ ಎಲ್ಲರನ್ನೂ ಭೇಟಿ ಮಾಡುತ್ತೇನೆ ಹಾಗೂ ಪಕ್ಷದ ಚಟುವಟಿಕೆಗಳಲ್ಲಿ ಭಾಗಿಯಾಗುತ್ತೇನೆ. ದಯಮಾಡಿ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದ್ರು.
ಇದನ್ನೂ ಓದಿ : – RS ELECTION – ಬಿಜೆಪಿಯ ನಿರ್ಮಲಾ ಸೀತಾರಾಮನ್, ಜಗ್ಗೇಶ್, ಕಾಂಗ್ರೆಸ್ ನ ಜೈರಾಂ ರಮೇಶ್ ಗೆ ಗೆಲುವು