545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ಮಾಜಿ ಎಡಿಜಿಪಿ ಅಮೃತ್ ಪೌಲ್ (AMRUT PAUL) ರನ್ನು ನ್ಯಾಯಾಲಯ ಮತ್ತೆ ಮೂರು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿದೆ.
ಪೊಲೀಸ್ ನೇಮಕಾತಿ ವಿಭಾದ ಎಜಿಡಿಪಿಯಾಗಿದ್ದ ಅಮೃತ್ ಪೌಲ್ ರ ಸಿಐಡಿ (CID) ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಪೌಲ್ ರನ್ನು 1ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರುಪಡಿಸಿದ್ದು ನ್ಯಾಯಾಲಯ ಮತ್ತೆ ಮೂರು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ ಆದೇಶಿಸಿದೆ. ಎಡಿಜಿಪಿ ಅಮೃತ್ ಪೌಲ್ ಹಾಗೂ ಆರೋಪಿ ಶಾಂತಕುಮಾರ್ ನಡುವೆ 1.36 ಕೋಟಿ ರೂಪಾಯಿ ಹಣ ವರ್ಗಾವಣೆ ಆಗಿದೆ. ಮೊಬೈಲ್ ದತ್ತಾಂಶವನ್ನು ಅಳಿಸಿ ಹಾಕಲಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆಗಾಗಿ ಇನ್ನು ಐದು ದಿನಗಳ ಕಾಲ ವಶಕ್ಕೆ ನೀಡುವಂತೆ ಸಿಐಡಿ ಪರ ವಕೀಲರು ಕೋರಿದ್ದರು. ಇದನ್ನೂ ಓದಿ : – PSI ಅಕ್ರಮ ನೇಮಕಾತಿ ಪ್ರಕರಣ – ಎಡಿಜಿಪಿ ಅಮೃತ್ ಪಾಲ್ ಬಂಧನ
ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ ಮೂರು ಬಾರಿ ವಿಚಾರಣೆ ಎದುರಿಸಿದ್ದ ಅಮೃತ್ ಪೌಲ್ ರನ್ನು ಕಳೆದ ಜುಲೈ 4ರಂದು ಸಿಐಡಿ ಬಂಧಿಸಿತ್ತು. ಅಮೃತ್ ಪೌಲ್ 25 ಅಭ್ಯರ್ಥಿಗಳ ಜೊತೆ 30 ಲಕ್ಷ ರೂಪಾಯಿ ಡೀಲ್ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮತ್ತಷ್ಟು ವಿಚಾರಣೆ ನಡೆಸಲು ಸಿಐಡಿ ಪೌಲ್ ರನ್ನು ಬಂಧಿಸಿದೆ. ಇದನ್ನೂ ಓದಿ : – ADGP ಅಮೃತ್ ಪಾಲ್ 10 ದಿನ ಸಿಐಡಿ ಕಸ್ಟಡಿಗೆ – 1ನೇ ACMM ಕೋರ್ಟ್ ಆದೇಶ