13 ವರ್ಷಗಳಲ್ಲಿ ಕನ್ನಡಕ್ಕೆ ಸಿಕ್ಕಿದ ಅನುದಾನ ಕೇವಲ 3 ಕೋಟಿ, ಕನ್ನಡ ತಬ್ಬಲಿ ಮಕ್ಕಳ ಭಾಷೆಯೇ? ಕುಮಾರಸ್ವಾಮಿ ಪ್ರಶ್ನೆ

ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿ 15 ವರ್ಷಗಳೇ ಕಳೆದಿದೆ.13 ವರ್ಷಗಳಲ್ಲಿ ಕನ್ನಡಕ್ಕೆ ಸಿಕ್ಕಿದ ಅನುದಾನ ಕೇವಲ 3 ಕೋಟಿ ರೂ.!! ತಮಿಳಿಗೆ ಸಿಕ್ಕಿದ್ದು 43 ಕೋಟಿ.

ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿ 15 ವರ್ಷಗಳೇ ಕಳೆದಿದೆ.13 ವರ್ಷಗಳಲ್ಲಿ ಕನ್ನಡಕ್ಕೆ ಸಿಕ್ಕಿದ ಅನುದಾನ ಕೇವಲ 3 ಕೋಟಿ ರೂ.!! ತಮಿಳಿಗೆ ಸಿಕ್ಕಿದ್ದು 43 ಕೋಟಿ. ಆದರೆ, ಸಂಸ್ಕೃತಕ್ಕೆ ಇವರು ಕೊಟ್ಟಿದ್ದು ಬರೋಬ್ಬರಿ 643 ಕೋಟಿ!!! ಕನ್ನಡದ ಕಣ್ಣಿಗೆ ಸುಣ್ಣ, ಬೇರೆ ಭಾಷೆಗಳಿಗೆ ಬೆಣ್ಣೆ. ಕನ್ನಡ ತಬ್ಬಲಿ ಮಕ್ಕಳ ಭಾಷೆಯೇ? ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ (H.D KUMARASWAMY)ಪ್ರಶ್ನೆ ಮಾಡಿದ್ದಾರೆ.

ಈ ಕುರಿತಾಗಿ ಸರಣಿ ಟ್ವೀಟ್ಗಳನ್ನು ಮಾಡಿರುವ ಅವರು, ಕೇಂದ್ರದಿಂದ ಕನ್ನಡಕ್ಕೆ ಆಗುತ್ತಿರುವ ಅನುದಾನದ ಅನ್ಯಾಯದ ವಿರುದ್ಧ ನಾನು ಅನೇಕ ಸಲ ದನಿ ಎತ್ತಿದ್ದೇನೆ. ಬಿಜೆಪಿ,ಕಾಂಗ್ರೆಸ್ ಪಕ್ಷಗಳ ಆಡಳಿತಕ್ಕೆ ಅದು ಕೇಳಲೇ ಇಲ್ಲ. ಕೇಂದ್ರದಲ್ಲಿ ಬಿಜೆಪಿ (BJP)ಸರ್ಕಾರ ಬಂದ ಮೇಲೆ ಸಂಸ್ಕೃತ, ಹಿಂದಿ ತುಷ್ಟೀಕರಣದಿಂದ ಕನ್ನಡಕ್ಕೆ ಅದೆಷ್ಟು ವಂಚನೆ ಆಗಿದೆ ಎನ್ನುವುದಕ್ಕೆ ಅನುದಾನದ ತಾರತಮ್ಯವೇ ಸಾಕ್ಷಿ ಎಂದಿದ್ದಾರೆ. ಇದನ್ನು ಓದಿ :- ಪ್ರಜಾಪ್ರಭುತ್ವದಲ್ಲಿ ಹೊಸ ಪಕ್ಷವನ್ನು ಕಟ್ಟಲು ಸ್ವಾತಂತ್ರ್ಯ ಇದೆ – ಎಸ್.ಆರ್ ಹಿರೇಮಠ್

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ.ದೊಡ್ದರಂಗೇಗೌಡ ಅವರು ಸಮ್ಮೇಳನದ ತಮ್ಮ ಭಾಷಣದಲ್ಲಿ ಅನುದಾನದ ಅನ್ಯಾಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (BASAVRAJ BOMMAI )ಅವರ ಎದುರೇ ಬಿಜೆಪಿ ಸರಕಾರದ ಮುಖಕ್ಕೆ ರಾಚುವಂತೆ ಹೇಳಿದ್ದಾರೆ. ಈ ವಿಷಯ ಪ್ರಸ್ತಾಪ ಮಾಡಿದ ಅವರನ್ನು ಮನಸಾರೆ ಅಭಿನಂದಿಸುತ್ತೇನೆ ಎಂದು ಹೇಳಿದ್ರು.

ಹಿಂದಿ ಹೇರಿಕೆ ಮೂಲಕ ಸದಾ ಕನ್ನಡದ ಮೇಲೆ ಪ್ರಹಾರ ನಡೆಸುತ್ತಲೇ ಇರುವ ಬಿಜೆಪಿ, ಅವಕಾಶ ಸಿಕ್ಕಾಗಲೆಲ್ಲ ಕನ್ನಡದ ಬೇರುಗಳಿಗೆ ಕೊಡಲಿಪೆಟ್ಟು ಕೊಡುತ್ತಿದೆ. ನೆಲ, ಜಲ, ಭಾಷೆ ವಿಷಯದಲ್ಲಿ ಕರ್ನಾಟಕಕ್ಕೆ ಆ ಪಕ್ಷವು ಅನ್ಯಾಯದ ಸರಣಿಯನ್ನೇ ಮುಂದುವರಿಸಿದೆ. ಬೆಳಗಾವಿ (BELGAVI) ವಿಷಯದಲ್ಲಿ ಬಿಜೆಪಿ ವರ್ತಿಸುತ್ತಿರುವ ರೀತಿ ಕಳವಳಕಾರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ :- ಬೆಂಗಳೂರಿನಲ್ಲಿ ಹಿಟ್ & ರನ್‍ಗೆ ಮಹಿಳೆಯರಿಬ್ಬರು ಬಲಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!