ದೇಶದಲ್ಲಿ ಕಳೆದ ಒಂದು ದಿನದಲ್ಲಿ 15,102 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 278 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ ಸಾವಿನ ಸಂಖ್ಯೆ 5,12,622ಕ್ಕೆ ಜಿಗಿತ ಕಂಡಿದೆ.
ದೇಶದಲ್ಲಿ ಒಂದೇ ದಿನ 31,377 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 4,21,89,887ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 1,64,377ಕ್ಕೆ ಇಳಿದಿದೆ.