ಕಾಂಗ್ರೆಸ್ ಸರ್ಕಾರ- ಬಿಜೆಪಿ ಸರ್ಕಾರದ ಅಕ್ರಮದ ಬಗ್ಗೆ ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಮಾಡಿಸಿ ಅಂತ ಸಿಎಂ ಬೊಮ್ಮಾಯಿಗೆ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಸವಾಲು ಹಾಕಿದ್ದಾರೆ.
ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ ಎಂಬ ಸಿಎಂ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಅಲ್ಲ ಭ್ರಷ್ಟಾಚಾರ ಗಂಗೋತ್ರಿ. ಬಿಜೆಪಿ ಎಂದು ಕಿಡಿಕಾರಿದ್ರು. 40% ಕಮೀಷನ್ ಆರೋಪ ನಮ್ಮ ಸರ್ಕಾರದ ಮೇಲೆ ಮಾಡಿದ್ರಾ? ಗುತ್ತಿಗೆದಾರರು ನಮ್ಮ ಸರ್ಕಾರದ ಮೇಲೆ ಪತ್ರ ಬರೆದಿದ್ದಾರಾ? ಎಂದು ಪ್ರಶ್ನಿಸಿದ್ರು. ಸಚಿವ ಸುಧಾಕರ್ ಹಗರಣ ಅಂತ ಹೇಳಿದ್ದಾರೆ. ಅದು ಹಗರಣ ಅಲ್ಲ. ಸಿಎಜಿ ರಿಪೋರ್ಟ್ ನಲ್ಲಿ ವ್ಯತ್ಯಾಸ ಇದೆ ಅಂತ ಹೇಳಿದ್ರು ಅಷ್ಟೆ. ಯಾವ ಯಾವ ಇಲಾಖೆಯಲ್ಲಿ ವ್ಯತ್ಯಾಸ ಇದೆ ಅಂತ ನನಗೆ ಗೊತ್ತಿಲ್ಲ. ಸುಧಾಕರ್ ನಮ್ಮ ಜೊತೆ ಇದ್ದವನು. ಆಗ ಯಾಕೆ ಏನೂ ಹೇಳಲಿಲ್ಲ. ಈಗ ಹೇಳಿದ್ರೆ ಹೇಗೆ. ಅದಕ್ಕೆ ಕಿಮ್ಮತ್ತು ಇದೆಯಾ ಅಂತ ಪ್ರಶ್ನೆ ಮಾಡಿದ್ರು. ಇದನ್ನು ಓದಿ :- ಕರ್ನಾಟಕ ಇತಿಹಾಸದ ಭ್ರಷ್ಟಾತಿ ಭ್ರಷ್ಟ ಮಂತ್ರಿ ಸುಧಾಕರ್ – ಸಿದ್ದರಾಮಯ್ಯ ಗಂಭೀರ ಆರೋಪ
ಬಿಜೆಪಿಯವರು ನಮ್ಮ ಯಾತ್ರೆಯಿಂದ ಪ್ಯಾನಿಕ್ ಆಗ್ತಿದ್ದಾರೆ. ಸೋಲುವ ಭಯದಲ್ಲಿ ಬಾಯಿಗೆ ಬಂದ ಹಾಗೆ ಮಾತಾಡ್ತಿದ್ದಾರೆ. ನೀವು ವಿಪಕ್ಷದಲ್ಲಿ ಇದ್ದಾಗ ಬಾಯಿಗೆ ಕಡುಬು ಇಟ್ಟು ಕೊಂಡಿದ್ರಾ? ನಮ್ಮದು ನಿಮ್ಮದು ಸೇರಿ ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಲಿ. ಯಾರೇ ತಪ್ಪು ಮಾಡಿದ್ರೂ ಶಿಕ್ಷೆ ಆಗಲಿ. ಸುಪ್ರೀಂಕೋರ್ಟ್ (Supreme Court) ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಲಿ ಅಂತ ಸಿದ್ದರಾಮಯ್ಯ ಸವಾಲು ಹಾಕಿದ್ರು.
ಇದನ್ನು ಓದಿ :- Bharat Jodo- ಮಾಜಿ ಪ್ರಧಾನಿ ದೇವೇಗೌಡರಿಗೆ ಭಾರತ್ ಜೋಡೋ ಸಮಾರೋಪಕ್ಕೆ ಆಹ್ವಾನ