ಬಿಜೆಪಿ (BJP ) ಅಧಿಕಾರ ಪಿಪಾಸು, ಅನ್ಯಪಕ್ಷ ಅಧಿಕಾರದಲ್ಲಿರುವುದು ಆ ಪಕ್ಷಕ್ಕೆ ಅಪಥ್ಯ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ (H.D KUMARSWAMY ) ಕಿಡಿಕಾರಿದ್ದಾರೆ.
ಈ ಕುರಿತಾಗಿ ಸರಣಿ ಟ್ವೀಟ್ ಮಾಡಿರುವ ಅವರು, ಬಿಬಿಎಂಪಿ (BBMP) ವಾರ್ಡ್ ವಿಂಗಡಣೆ ವಿಚಾರವಾಗಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಜೆಪಿ ಅಧಿಕಾರ ಪಿಪಾಸು. ಅನ್ಯಪಕ್ಷ ಅಧಿಕಾರದಲ್ಲಿರುವುದು ಆ ಪಕ್ಷಕ್ಕೆ ಅಪಥ್ಯ. ತನ್ನ ಕೆಟ್ಟ ಆಡಳಿತಕ್ಕೆ ಬೇಸತ್ತು ಬೆಂಗಳೂರಿಗರು ಬೇರೆ ಪಕ್ಷಕ್ಕೆ ಎಲ್ಲಿ ಮತ ಹಾಕಿಬಿಟ್ಟಾರೋ ಎನ್ನುವ ಭೀತಿಯಿಂದ ಚುನಾವಣೆಯನ್ನೇ ನಡೆಸಲಿಲ್ಲ. ಕೋರ್ಟ್ ಚಾಟಿ ಬೀಸಿದ ಮೇಲೆ ಚುನಾವಣೆ ಎನ್ನುತ್ತಿರುವ ಸರಕಾರ, ಈಗ ವಾರ್ಡ್ ವಿಂಗಡಣೆಯ ನಾಟಕ ಅಡಿದೆ ಎಂದಿದ್ದಾರೆ. ಇದನ್ನೂ ಓದಿ : – 2011 ರ ಜನಸಂಖ್ಯೆ ಆಧಾರದ ಮೇಲೆ ಬಿಬಿಎಂಪಿ ವಾರ್ಡ್ ಮರುವಿಂಗಡನೆ –ತುಷಾರ್ ಗಿರಿನಾಥ್
ಪಾಲಿಕೆಯಾಗಿದ್ದನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನಾಗಿ ನಾನು ಮಾಡಿದ್ದು ನಗರದ ಜನರಿಗೆ ಸ್ಥಳೀಯವಾಗಿ ಅತ್ಯುತ್ತಮ ಅಡಳಿತ, ಸೇವೆಗಳು ಲಭ್ಯವಾಗಲಿ ಎಂದು. ಆದರೆ, ಬಿಜೆಪಿ ಸರಕಾರವು ಬಿಬಿಎಂಪಿ (BBMP) ರಚನೆಯ ಮೂಲ ಆಶಯವನ್ನೇ ಬುಡಮೇಲು ಮಾಡಿ ರಾಜಕೀಯ ಸ್ವಾರ್ಥ ಸಾಧನೆಯ ಷಡ್ಯಂತ್ರ ನಡೆಸಿದೆ ಎಂದು ಆರೋಪಿಸಿದ್ದಾರೆ.
ಮೊನ್ನೆಯಷ್ಟೇ ಪ್ರಧಾನಿ ಬಂದು ಹೋಗಿದ್ದಾರೆ. ಅದಕ್ಕಾಗಿ 23 ಕೋಟಿ ಖರ್ಚು ಮಾಡಿ ನಗರದ ರಸ್ತೆ ಗುಂಡಿ ಮುಚ್ಚಲಾಗಿದೆ. ಇದನ್ನು ಗಮನಿಸಿದರೆ ಪ್ರಧಾನಿ ನಗರದ ಬೇರೆ ಬೇರೆ ಮಾರ್ಗಗಳಲ್ಲಿ ಆಗಾಗ್ಗೆ ಸಂಚರಿಸಬೇಕು. ಆಗ ಅವರನ್ನು ಮೆಚ್ಚಿಸುವ ಸಲುವಾಗಿಯಾದರೂ ಅಧಿಕಾರಿಗಳು ಹಾಳಾಗಿರುವ ರಸ್ತೆಗಳನ್ನು ಸರಿಪಡಿಸಬಹುದು” ಎಂದು ಕೋರ್ಟ್ ಚಾಟಿ ಬೀಸಿದೆ. ಇದನ್ನೂ ಓದಿ : – ಕೊಡಗಿನ ಕರಿಕೆ, ಚೆಂಬು, ಸಂಪಾಜೆ, ಗ್ರಾಮದಲ್ಲಿ ಕಂಪಿಸಿದ ಭೂಮಿ
ಇನ್ನು, ಪ್ರಧಾನಿಗಳಿಗಾಗಿ ಸಿದ್ಧಪಡಿಸಿದ ರಸ್ತೆಯೇ ಕುಸಿದುಬಿದ್ದಿದೆ. 40% ಕಮಿಷನ್ & ಕಳಪೆ ಕಾಮಗಾರಿಯ ಫಲಶ್ರುತಿ ಇದು. ದೇಶದ ಪ್ರಧಾನಿಯೇ ಸಂಚರಿಸಿದ ರಸ್ತೆಯೇ ಕಳಪೆ!! ಬಿಜೆಪಿ ಅಭಿವೃದ್ಧಿ ಮಾದರಿ ಎಂದರೆ ಇದೇನಾ? ಐಟಿ ಸಿಟಿಯ ಸ್ಥಿತಿ ಅಯ್ಯೋ ಎನ್ನುವಂತಿದೆ ಎಂದಿದ್ದಾರೆ.
ಇದನ್ನೂ ಓದಿ : – ರಾಜ್ಯದಲ್ಲಿಇನ್ನೆರಡು ದಿನ ಭಾರೀ ಮಳೆ –ಕರಾವಳಿಯಲ್ಲಿ ಆರೆಂಜ್ ಅಲರ್ಟ್