ಬೆಂಗಳೂರು : ಧಾರವಾಡದ ಕವಿವಿಯ ಸೃಜನಾ ರಂಗಮಂದಿರದಲ್ಲಿ ಉಸ್ತುವಾರಿ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಜನತಾ ದರ್ಶನವನ್ನು ಚಾಲನೆ ನೀಡಲಾಯಿತು.

ʼಬಳಿ ಕಾರ್ಯಕ್ರಮ ಉದ್ದೇಶಿಸಿ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮಾತನಾಡಿ, ಸಾರ್ವಜನಿಕರ ನೋವು, ಸಮಸ್ಯೆ ಆಲಿಸಲು ಜನತಾ ದರ್ಶನ ಒಂದು ಪ್ರಮುಖ ಮಾಧ್ಯಮವಾಗಿದೆ. ಇದರಿಂದ ಆಡಳಿತದಲ್ಲಿ ಪಾರದರ್ಶಕತೆ, ಅಧಿಕಾರಿಗಳಲ್ಲಿ ಕ್ರಿಯಾಶೀಲತೆ ಮೂಡುತ್ತದೆ ಎಂದು ಉಸ್ತುವಾರಿ ಸಚಿವ ಸಂತೋಷ ಲಾಡ್ ಎಂದರು.

ಸಾರ್ವಜನಿಕರಿಗೆ ಉತ್ತಮ ಆಡಳಿತ ವ್ಯವಸ್ಥೆ ಮ ಮುಖ್ಯಮಂತ್ರಿಗಳ ಸೂಚನೆಯಂತೆ ಜರುಗುತ್ತಿರುವ ಜನತಾ ದರ್ಶನವು ನಮ್ಮ ಜಿಲ್ಲೆ ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿಯೂ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ.. ಕಳೆದ ತಿಂಗಳ ಜಿಲ್ಲಾಮಟ್ಟದ ಜನತಾ ದರ್ಶನದಲ್ಲಿ ಸ್ವೀಕರಿಸಿದ್ದ ಸಾರ್ವಜನಿಕರ ಅಹವಾಲುಗಳಲ್ಲಿ ಶೇ. 90 ರಷ್ಟು ಅರ್ಜಿಗಳನ್ನು ಈಗಾಗಲೇ ನಿಯಮಾನುಸಾರ ಪರಿಶೀಲಿಸಿ, ವಿಲೇವಾರಿ ಮಾಡಲಾಗಿದೆ. ಸಂಬಂಧಿಸಿದ ಅರ್ಜಿದಾರರಿಗೆ ಎಸ್.ಎಂ.ಎಸ್. ಮೂಲಕ ಮಾಹಿತಿ ಹಾಗೂ ಸದರಿ ಅರ್ಜಿಗಳಿಗೆ ಹಿಂಬರಹ ನೀಡಲಾಗಿದೆ. ಉಳಿದ ಅರ್ಜಿಗಳನ್ನು ಇಲಾಖೆ ಹಿರಿಯ ಅಧಿಕಾರಿಗಳು ಪರಿಶೀಲಿಸುತ್ತಿದ್ದು, ಅವುಗಳನ್ನು ಸಹ ಕಾಲಮಿತಿಯಲ್ಲಿ ವಿಲೇವಾರಿ ಮಾಡಲಾಗುವುದು ಎಂದರು.

ಜನತಾ ದರ್ಶನ ಕಾರ್ಯಕ್ರಮದಿಂದ ಬಡವರ ಸಮಸ್ಯೆ, ನೋವುಗಳನ್ನು ಹತ್ತಿರದಿಂದ ತಿಳಿಯಲು ಜನಪ್ರತಿನಿಧಿಗಳಿಗೆ ಮತ್ತು ಅಧಿಕಾರಿಗಳಿಗೆ ಅವಕಾಶವಾಗುತ್ತದೆ. ಸಮಸ್ಯೆ ಆಲಿಸಿದ ಅಧಿಕಾರಿಗಳು ಸಂಯಮದಿಂದ ಪರಿಶೀಲಿಸಿ, ಪರಿಹಾರ ಕ್ರಮ ಕೈಗೊಳ್ಳುತ್ತಾರೆ… ಅಲ್ಲದೆ ಸಾವಧಾನದಿಂದ ಪ್ರತಿ ಅರ್ಜಿಗಳನ್ನು ಸ್ವೀಕರಿಸಿದ ಸಚಿವ ಸಂತೋಷ ಲಾಡ ಅವರು, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ನಿಯಮಾನುಸಾರ ಪರಿಶೀಲಿಸಿ, ಅಹವಾಲು, ಮನವಿಗಳನ್ನು ಪರಿಹರಿಸಲು ತಿಳಿಸಿದರು.