ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬೆಂಬಲ – ಜೆಡಿಎಸ್ ಪರಿಷತ್‌ ಸದಸ್ಯ ಮರಿತಿಬ್ಬೇಗೌಡ ಘೋಷಣೆ

ವಿಧಾನ ಪರಿಷತ್‌, ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮಧು ಜಿ ಮಾದೇಗೌಡ ಅವರಿಗೆ ಬೆಂಬಲ ನೀಡುವುದಾಗಿ ಜೆಡಿಎಸ್‌ ವಿಧಾನಪರಿಷತ್‌ ಸದಸ್ಯ ಮರಿತಿಬ್ಬೇಗೌಡ ಅಧಿಕೃತವಾಗಿ ಪ್ರಕಟಿಸಿದ್ದಾರೆ.
ಮರಿ ತಿಬ್ಬೇಗೌಡ ಆಪ್ತ ಕೀಲಾರ ಜಯರಾಮು ಅವರಿಗೆ ಜೆಡಿಎಸ್‌ ವರಿಷ್ಠರು ಟಿಕೆಟ್‌ ನಿಕಾಕರಿಸಿದ ಹಿನ್ನೆಲೆಯಲ್ಲಿ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದರು. ಜೆಡಿಎಸ್‌ ಅಭ್ಯರ್ಥಿ ಎಚ್‌.ಕೆ.ರಾಮು ಅವರ ಪರ ಪ್ರಚಾರ ಮಾಡುವುದಿಲ್ಲ, ಯಾರಿಗೆ ಬೆಂಬಲ ನೀಡಬೇಕು ಎಂಬುದನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ತಿಳಿಸಿದ್ದರು. ಇದನ್ನು ಓದಿ :-   ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮೂವರ ದುರ್ಮರಣ


ಜೆಡಿಎಸ್‌ ( JDS ) ನ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್‌ ನೀಡಿದ್ದರೂ ನಾನು ಅವರ ಪರವಾಗಿ ಕೆಲಸ ಮಾಡುತ್ತಿದ್ದೆ. ಪಕ್ಷಕ್ಕೆ ಸಂಬಂಧವೇ ಇಲ್ಲದ ವ್ಯಕ್ತಿಗೆ ಟಿಕೆಟ್‌ ನೀಡಲಾಗಿದೆ. ಆ ಮೂಲಕ ದಕ್ಷಿಣ ಪದವೀಧರರ ಕ್ಷೇತ್ರದಲ್ಲೂ ಹಣ ಉಳ್ಳವರಿಗೆ ಮಣೆ ಹಾಕಲಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ನಾಲ್ಕೂ ಜಿಲ್ಲೆಗಳಲ್ಲಿರುವ ನನ್ನ ಹಿತೈಷಿಗಳ ಸಲಹೆಯಂತೆ ನಾನು ಕಾಂಗ್ರೆಸ್‌ ಅಭ್ಯರ್ಥಿಗೆ ಬೆಂಬಲ ನೀಡಲು ನಿರ್ಧರಿಸಿದ್ದೇನೆ. ಜಿ.ಮಾದೇಗೌಡರು ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಸಾವಿರಾರು ಜನರಿಗೆ ವಿದ್ಯಾದಾನ ಮಾಡಿದ್ದಾರೆ. ಆ ಸಂಸ್ಥೆಗಳ ಅಧ್ಯಕ್ಷರಾಗಿರುವ ಮಧು ಮಾದೇಗೌಡರಿಗೆ ಬೆಂಬಲಿಸುವಂತೆ ನನ್ನ ಬೆಂಬಲಿಗರು ಸಲಹೆ ನೀಡಿದ್ದು ಅದರಂತೆ ನಡೆದುಕೊಳ್ಳುತ್ತೇನೆ’ ಎಂದರು.

ಇದನ್ನು ಓದಿ :-  ಸಿದ್ದರಾಮಯ್ಯ ಎಲ್ಲದರಲ್ಲೂ ರಾಜಕೀಯ ಮಾಡ್ತಾರೆ – ಸಿಎಂ ಬೊಮ್ಮಾಯಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!