ಪ್ರಧಾನಿ ಮೋದಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ ಆರೋಪದ ಮೇರೆಗೆ ಬಂಧನಕ್ಕೀಡಾಗಿದ್ದ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿಗೆ ಕೊನೆಗೂ ಜಾಮೀನು ದೊರೆತಿದೆ.
ಮೋದಿ ವಿರುದ್ಧ ಟ್ವೀಟ್ ಮಾಡಿರುವ ಪ್ರಕರಣದಲ್ಲಿ ಜಿಗ್ನೇಶ್ ಮೇವಾನಿಗೆ ಅಸ್ಸಾಂ ನ್ಯಾಯಾಲಯ ಜಾಮೀನು ನೀಡಿದೆ. ನಿನ್ನೆ ಜಾಮೀನು ಅರ್ಜಿಯ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿತ್ತು. ಇದನ್ನೂ ಓದಿ :- ಪ್ರಧಾನಿ ಕಾಶ್ಮೀರ ಭೇಟಿಗೆ ಪಾಕ್ ಕ್ಯಾತೆ- ಸಿಂಧೂ ಜಲ ಒಪ್ಪಂದದ ನೇರ ಉಲ್ಲಂಘನೆ ಎಂದು ಆರೋಪ
ಅಸ್ಸಾಂನ ಕೊಕ್ರಜಾರ್‌ನ ಸ್ಥಳೀಯ ಬಿಜೆಪಿ ನಾಯಕರೊಬ್ಬರು ಮೇವಾನಿ ವಿರುದ್ಧ ದೂರು ದಾಖಲಿಸಿದ್ದರು. ನಂತರ ಅಸ್ಸಾಂ ಪೊಲೀಸರ ತಂಡ ಗುಜರಾತ್‌ನ ಪಾಲನ್‌ಪುರದಲ್ಲಿ ಜಿಗ್ನೇಶ್ ಮೇವಾನಿ ಅವರನ್ನು ಬಂಧಿಸಿತ್ತು.
ಮೇವಾನಿ ವಿರುದ್ಧ ಕ್ರಿಮಿನಲ್ ಪಿತೂರಿ, ಪೂಜಾ ಸ್ಥಳಕ್ಕೆ ಸಂಬಂಧಿಸಿದ ಅಪರಾಧ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವುದು. ಶಾಂತಿ ಭಂಗಕ್ಕೆ ಕಾರಣವಾಗಬಹುದಾದ ಪ್ರಚೋದನೆಯ ಆರೋಪಗಳನ್ನು ಹೊರಿಸಿ ಬಂಧಿಸಲಾಗಿತ್ತು.
ಇದನ್ನೂ ಓದಿ :- ರಾಜ್ಯಪಾಲರ ಬದಲು ಸರ್ಕಾರದಿಂದಲೇ ವಿ.ವಿ.ಗಳಿಗೆ ಉಪ ಕುಲಪತಿಗಳ ನೇಮಕ- ತಮಿಳುನಾಡು ವಿಧಾನಸಭೆ ಅಂಗೀಕಾರ