ಕನ್ನಡ ಚಿತ್ರರಂಗದ (Kannada filmindustry)ಎವರ್ ಗ್ರೀನ್ ಬ್ಯೂಟಿ ಕನಸಿನ ರಾಣಿ ಮಾಲಾಶ್ರೀ (Kanasina rani malashree ) ಮತ್ತೆ ಸಿನಿಮಾ ಲೋಕಕ್ಕೆ ಕಂಬ್ಯಾಕ್ ಆಗ್ತಿದ್ದಾರೆ. ಪತಿ ಅಗಲಿಕೆ ನೋವಿನ ನಂತ್ರ ಒಂದಷ್ಟು ಗ್ಯಾಂಪ್ ತೆಗೆದುಕೊಂಡಿದ್ದ ಮಾಲಾಶ್ರೀ ನೈಟ್ ಕರ್ಫ್ಯೂ’ (Night curfew) ಸಿನಿಮಾ ಮೂಲಕ ಬೆಳ್ಳಿತೆರೆಮೇಲೆ (Silver screen) ದಿಬ್ಬಣ ಹೊರಡಲಿದ್ದಾರೆ.
ಈ ಹಿಂದೆ ‘ಪುಟಾಣಿ ಸಫಾರಿ’ (Puttani safari) ನಿರ್ದೇಶನ ಮಾಡಿದ್ದ ರವೀಂದ್ರ ವಂಶಿ (Ravindra vamshi) ಈ ಚಿತ್ರಕ್ಕೆ ಕಥೆ ಬರೆದು, ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಚಿತ್ರತಂಡ ಸುದ್ದಿಗೋಷ್ಠಿ ಆಯೋಜಿಸಿತ್ತು. ಈ ಸಂದರ್ಭದಲ್ಲಿ ಇಡೀ ತಂಡ ಭಾಗಿಯಾಗಿ ತಮ್ಮ ಶೂಟಿಂಗ್ ಅನುಭವ ಹಂಚಿಕೊಂಡಿದ್ದಾರೆ.ಮಾಲಾಶ್ರೀ ಮಾತನಾಡಿ, ನನಗೆ ತುಂಬಾ ಗ್ಯಾಂಪ್ ಅನಿಸುತ್ತಿಲ್ಲ, ತುಂಬಾ ಖುಷಿಯಾಗ್ತಿದೆ. ಕಥೆಯಲ್ಲಿ ಹೊಸತನವಿದೆ. ಹೊಸ ತಂಡ ನನಗೆ ಹೊಸ ಅನುಭವ, ಚಾಲೆಂಜ್ ಇರುತ್ತದೆ. ನಾನು ಡಾಕ್ಟರ್ (Doctor)ಆಗಿ ಎರಡನೇ ಸಿನಿಮಾವಿದು ಎಂದು ಹೇಳಿದರು.
ತುಂಬಾ ಕಾರಣಕ್ಕೆ ಈ ಸಿನಿಮಾ ನನಗೆ ವಿಶೇಷವಾಗಿದೆ. ಮಾಲಾಶ್ರೀ ಅವರ ಜೊತೆ ಕೆಲಸ ಮಾಡ್ತಿರೋದು ಖುಷಿ ಕೊಟ್ಟಿದೆ. ಇದೊಂದು ಕ್ರೈಮ್ ಥ್ರಿಲ್ಲರ್. ಕೊರೋನಾ ಕಾಲಘಟ್ಟದಲ್ಲಿ ನಡೆಯುವ ಕಥೆ. ನಾನು ಡಾಕ್ಟರ್ ಪಾತ್ರ ಮಾಡಿದ್ದೇನೆ ಎಂದು ರಂಜನಿ ರಾಘವನ್ (Rajani raghavan) ತಮ್ಮ ಪಾತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.ನಿರ್ದೇಶಕ ರವೀಂದ್ರ ವಂಶಿ, ನೈಟ್ ಕರ್ಫ್ಯೂ ವಿಶೇಷ ಸಿನಿಮಾ. ಸಿನಿಮಾದಲ್ಲಿ ನಾಲ್ಕು ಅಂಶ ಮುಖ್ಯ. ಕಥೆ ಚಿತ್ರ-ಕಥೆ, ಸಂಭಾಷಣೆ. ಈ ಸಿನಿಮಾದಲ್ಲಿ, ವಿಶೇಷ ಕಥೆ, ನಿರೂಪಣಾ ಶೈಲಿ ಇದ್ದು, ಸಿನಿಮಾದ ತಾರಾಬಳಗ ತುಂಬಾ ಚೆನ್ನಾಗಿದೆ ಎಂದರು. ಇದನ್ನೂ ಓದಿ : – ಡಾಲಿ ಧನಂಜಯ ಅಭಿನಯದ Once Upon A Time “ಜಮಾಲಿಗುಡ್ಡ” ಚಿತ್ರದ ಚಿತ್ರೀಕರಣ ಪೂರ್ಣ
ಇದೊಂದು ಆಕ್ಷನ್-ಥ್ರಿಲ್ಲರ್ ಚಿತ್ರವಾಗಿದ್ದು ಮೆಡಿಕಲ್ ಮಾಫಿಯಾ ಕುರಿತಾದ ಕಥೆ ಒಳಗೊಂಡಿದ್ದು, ಪ್ರಮೋದ್ ಶೆಟ್ಟಿ Pramod shetty), ಬಲರಾಜ್ವಾಡಿ, ವರ್ಧನ್ ,ಅಶ್ವಿನ್, ರಂಗಾಯಣ ರಘು ಸಾಧು ಕೋಕಿಲ, ಮಂಜು ಪಾವಗಡ ಸೇರಿದಂತೆ ಹಲವು ಕಲಾವಿದರು ಸಿನಿಮಾದಲ್ಲಿದ್ದಾರೆ. ಸ್ವರ್ಣಗಂಗಾ ಫಿಲಂಸ್ ಬ್ಯಾನರ್ ಅಡಿಯಲ್ಲಿ ಬಿ.ಎಸ್ ಚಂದ್ರಶೇಖರ್ ನಿರ್ಮಿಸಿದ್ದಾರೆ. ಈ ಚಿತ್ರಕ್ಕೆ ಪ್ರಮೋದ್ ಭಾರತೀಯ ಕ್ಯಾಮೆರಾ ವರ್ಕ್, ಜಾಗ್ವಾರ್ ಸಣ್ಣಪ್ಪ ಸಾಹಸ ಸಿನಿಮಾಕ್ಕಿದೆ. ಇದನ್ನೂ ಓದಿ : – “ಪದವಿಪೂರ್ವ” ಹಾಡುಗಳ ಧ್ವನಿ ಮುದ್ರಣ ಕಾರ್ಯ ಶುರು