ಯುಗಾದಿ ಪರ್ವ ದಿನದಂದು ಎಲ್ಲರೂ ಕರ್ನಾಟಕ ಕರ್ನಾಟಕವಾಗಿಯೇ ಉಳಿಯಬೇಕೆಂಬ ಸಂಕಲ್ಪ ಮಾಡೋಣ ಅಂತ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ. ಅಧಿಕಾರಕ್ಕಾಗಿ ಏನನ್ನೂ ಮಾಡಲು ಹೇಸದ ಕಿಡಿಗೇಡಿಗಳಿಗೆ, ಧರ್ಮವಿನಾಶಕ್ಕೆ ಕಂಕಣತೊಟ್ಟ ಕಿರಾತಕರಿಗೆ ಪಾಠ ಕಲಿಸಬೇಕು. ಕರ್ನಾಟಕ ನಮ್ಮದು ರಾಜ್ಯ ಒಡೆಯುವ ದ್ರೋಹಿಗಳದ್ದಲ್ಲ. ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ದ್ರೋಹಿಗಳದ್ದಲ್ಲ ಅಂತ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ಕುರ್ಚಿ ಹಿಡಿಯಲು ಜನರ ಮನಸುಗಳನ್ನು ಮುರಿಯುತ್ತಿದ್ದಾರೆ. ನಾಳೆ ಮನೆಗಳನ್ನೂ ಒಡೆದು ಮನೆ ಮುರುಕರೂ ಆಗುತ್ತಾರೆ. ಅಣ್ಣ-ತಮ್ಮ, ಅಕ್ಕ-ತಂಗಿ ನಡುವೆಯೂ ಬೆಂಕಿ ಇಡುತ್ತಾರೆ. ಹಿಂದುತ್ವದ ಹೆಸರೇಳಿಕೊಂಡು ‘ಹಿಂದುತ್ವದ ವಿನಾಶ’ ಮಾಡುತ್ತಾರೆ. ಇಂತಹ ನಕಲಿಗಳ ಮಾತನ್ನು ಯಾರೂ ನಂಬಬಾರದು. ಕರಪತ್ರ ಹಿಡಿದು ಬಂದರೆ ಭಾವೈಕ್ಯತೆಯ ಪಾಠ ಹೇಳಿ ಕಳಿಸಿ ಅಂತ ಮಾಜಿ ಸಿಎಂ ಹೆಚ್ಡಿಕೆ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.
ಇದನ್ನು ಓದಿ :- ಪೊಲೀಸ್ ಧ್ವಜ ದಿನಾಚರಣೆಗೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ ಚಾಲನೆ