ಅಕ್ರಮವಾಗಿ ಹಣ ವರ್ಗಾವಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟಿ ಕುಬೇರ ಕೆಜಿಎಫ್ ಬಾಬುಗೆ (KGF Babu) ಇಡಿ ಸಮನ್ಸ್ ನೀಡಿದೆ. ವಿಚಾರಣೆಗಾಗಿ ನಾಳೆ 11ಗಂಟೆಗೆ ನವದೆಹಲಿಯ ಇಡಿ(ED) ಕಚೇರಿಗೆ ಬರುವಂತೆ ಕೆಜಿಎಫ್ ಬಾಬು ಸಮನ್ಸ್ ನೀಡಲಾಗಿದೆ. ಮೇ ತಿಂಗಳಲ್ಲಿ ಬೆಂಗಳೂರಿನ ವಸಂತ ನಗರದಲ್ಲಿರುವ ಕೆಜಿಎಫ್ ಬಾಬು ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು.
6 ಕಾರುಗಳಲ್ಲಿ 3 ತಂಡವಾಗಿ ಬಂದಿದ್ದ ಸುಮಾರು 20ಕ್ಕೂ ಹೆಚ್ಚು ಅಧಿಕಾರಿಗಳು ಉದ್ಯಮಿ ಹಾಗೂ ರಾಜಕಾರಣಿ ಕೆಜಿಎಫ್ ಬಾಬು ನಿವಾಸ ಹಾಗೂ ಕಚೇರಿಗಳಲ್ಲಿ ದಾಳಿ ಮಾಡಿ ಶೋಧ ನಡೆಸಿದ್ದರು. ಯೂಸೂಫ್ ಶರೀಫ್ ಅಲಿಯಾಸ್ ಕೆಜಿಎಫ್ ಬಾಬುಗೆ ಈ ಹಿಂದೆ ಇಡಿ ಶಾಕ್ ನೀಡಿತ್ತು. ಬಾಬು ಒಡೆತನದ ಬಂಗಲೆ, ಕಚೇರಿ ಸೇರಿ 7 ಕಡೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದರು. ಭಾರಿ ಪ್ರಮಾಣದಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳಿಗೆ ಕೆಲ ಸಾಕ್ಷ್ಯಗಳು ಲಭ್ಯವಾದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಬಾಬು ಒಡೆತನದ ವಸಂತನಗರದಲ್ಲಿರುವ ರುಕ್ಸಾನಾ ಪ್ಯಾಲೇಸ್ ನಿವಾಸ, ಉಮ್ರಾ ಡೆವಲರ್ಸ್, ಉಮ್ರಾ ರಿಯಲ್ ಎಸ್ಟೇಟ್ ಕಂಪನಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಜಾಲಾಡಿದ್ದರು. ಇದನ್ನು ಓದಿ :- ಎಸ್.ಆರ್ ಪಾಟೀಲ್- ನಡುವಿನ ಮುಸುಕಿನ ಗುದ್ದಾಟಕ್ಕೆ ತೆರೆ ಎಳೆದ ಸಿದ್ದರಾಮಯ್ಯ
ಬಾಬು ನೂರಾರು ಕೋಟಿ ರೂ. ಮೌಲ್ಯದ ಜಮೀನು, ನಿವೇಶನ, ಅಪಾರ್ಟ್ಮೆಂಟ್, ಕಟ್ಟಡಗಳನ್ನು ಹೊಂದಿರುವುದಕ್ಕೆ ಸಂಬಂಧಿಸಿದ ದಾಖಲೆಗಳು ಇಡಿ ಕೈ ಸೇರಿದೆ. ಮೊದಲ ಪತ್ನಿ ರುಕ್ಸಾನ, ಎರಡನೆ ಪತ್ನಿ ಶಾಜಿಯಾ, ಮಗಳು ಉಮ್ರಾ ಫರೀಫ್, ಮಗ ಅಫ್ನಾನ್ ಸೇರಿ ಕುಟುಂಬಸ್ಥರ ಹೆಸರಿನಲ್ಲಿ ಒಟ್ಟು 23 ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ. ಬಾಬು ತಮ್ಮ ಹೆಸರಿನಲ್ಲಿ 12 ಬ್ಯಾಂಕ್ಗಳಲ್ಲಿ ಖಾತೆ ಹೊಂದಿದ್ದಾರೆ. ಕುಟುಂಬಸ್ಥರ ಖಾತೆಯಲ್ಲಿ 70 ಕೋಟಿಗೂ ಅಧಿಕ ಹಣ ಇರುವುದು ಇಡಿ ತನಿಖೆಯಲ್ಲಿ ತಿಳಿದು ಬಂದಿದೆ.
ಇದನ್ನು ಓದಿ :- ಕರ್ನಾಟಕದಲ್ಲಿ 140 ಸ್ಥಾನಗಳನ್ನ ಗೆಲ್ಲಲಿದ್ದೇವೆ – ಬಿ.ಎಸ್ ಯಡಿಯೂರಪ್ಪ