ರಾಜ್ಯದ ಗಡಿಯಲ್ಲಿರುವ ಹಳ್ಳಿಗಳನ್ನು ಸೇರ್ಪಡೆಗೊಳಿಸುವಂತೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕೈಗೊಂಡಿರುವ ನಿರ್ಣಯವನ್ನು ಕಾಂಗ್ರೆಸ್ ( congress ) ಪಕ್ಷ ಖಂಡಿಸುತ್ತದೆ.
ರಾಜ್ಯದ ಗಡಿಯಲ್ಲಿರುವ ಹಳ್ಳಿಗಳನ್ನು ಸೇರ್ಪಡೆಗೊಳಿಸುವಂತೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕೈಗೊಂಡಿರುವ ನಿರ್ಣಯವನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ನಮ್ಮ ರಾಜ್ಯದ ಒಂದು ಹಳ್ಳಿಯನ್ನೂ ನಾವು ಬಿಟ್ಟುಕೊಡುವುದಿಲ್ಲ. ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ತಂತ್ರವಾಗಿ ಗಡಿ ವಿವಾದವನ್ನು ಬಳಸಿಕೊಳ್ಳುತ್ತಿದೆ.
1/2— DK Shivakumar (@DKShivakumar) December 27, 2022
ನಮ್ಮ ರಾಜ್ಯದ ಒಂದು ಹಳ್ಳಿಯನ್ನೂ ಬಿಟ್ಟುಕೊಡುವುದಿಲ್ಲ. ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ( bjp ) ಚುನಾವಣಾ ತಂತ್ರವಾಗಿ ಗಡಿ ವಿವಾದವನ್ನು ಬಳಸಿಕೊಳ್ಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ . ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಇದನ್ನು ಓದಿ : – ಬಳ್ಳಾರಿಯಲ್ಲಿ ರೆಡ್ಡಿ ಪಾಳಯದಿಂದ ಬಿಜೆಪಿಗೆ ಮೊದಲ ಶಾಕ್…!
ಕೇಂದ್ರ, ರಾಜ್ಯ ಹಾಗೂ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದೆ. ಹಾಗಾಗಿ ಇದು ಚುನಾವಣೆಗಾಗಿ ನಡೆಸುತ್ತಿರುವ ಕುತಂತ್ರ ಎಂಬುದರಲ್ಲಿ ಎಳ್ಳಷ್ಟೂ ಸುಳ್ಳಿಲ್ಲ. ಕನ್ನಡ ಭಾಷೆ, ನೆಲ, ಜಲ ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ. ಹಾಗಾಗಿ ಈ ವಿಷಯದಲ್ಲಿ ಎಂಥ ಹೋರಾಟಕ್ಕೂ ನಾವು ಸಿದ್ಧರಾಗಿದ್ದೇವೆ.
2/2— DK Shivakumar (@DKShivakumar) December 27, 2022
ಕೇಂದ್ರ, ರಾಜ್ಯ ಹಾಗೂ ಮಹಾರಾಷ್ಟ್ರ ( maharastra ) ದಲ್ಲಿ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದೆ.ಹಾಗಾಗಿ ಇದು ಚುನಾವಣೆಗಾಗಿ ನಡೆಸುತ್ತಿರುವ ಕುತಂತ್ರ ಎಂಬುದರಲ್ಲಿ ಎಳ್ಳಷ್ಟೂ ಸುಳ್ಳಿಲ್ಲ. ಕನ್ನಡ ಭಾಷೆ, ನೆಲ, ಜಲ ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ. ಹಾಗಾಗಿ ಈ ವಿಷಯದಲ್ಲಿ ಎಂಥ ಹೋರಾಟಕ್ಕೂ ನಾವು ಸಿದ್ಧರಾಗಿದ್ದೇವೆ ಎಂದು ಟ್ವೀಟ್ ಮೂಲಕ ಡಿ ಕೆಶಿ ಕಿಡಿಕಾರಿದ್ದಾರೆ.
ಇದನ್ನು ಓದಿ : – ಭಾರತದ ಒಡಿಶಾದಲ್ಲಿ ರಷ್ಯಾದ ಶ್ರೀಮಂತ ಸಂಸದ ಆಂಟೊನೊವ್ ನಿಗೂಢ ಸಾವು..!