ಬ್ರಾಹ್ಮಣ ಸಮುದಾಯದ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಆಕ್ಷೇಪಾರ್ಹ ಹೇಳಿಕೆ ನೀಡಿದ್ದು ತೀವ್ರ ವಿವಾದಕ್ಕೆ ಕಾರಣವಾಗಿದೆ.
ಕುಮಾರಸ್ವಾಮಿ ಇಂದು ಕುಮಟಾ ತಾಲೂಕಿನ ಗೋಕರ್ಣ(gokarna) ಮಹಾಬಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ರು. ಈ ವೇಳೆ ದೇವಸ್ಥಾನದ ಅರ್ಚಕರು ನಿಮ್ಮ ಹೇಳಿಕೆಯಿಂದ ಬೇಸರವಾಗಿದೆ. ನಿಮ್ಮ ಕುಟುಂಬದ ಮೇಲೆ ನಮಗೆ ಅಭಿಮಾನವಿದೆ.
ಗೋಕರ್ಣದಲ್ಲೇ ನಿಮ್ಮ ಸ್ಪಷ್ಟೀಕರಣ ತಿಳಿಸಿ ಎಂದು ಕುಮಾರಸ್ವಾಮಿವರಿಗೆ ಸ್ಪಷ್ಟನೆ ಕೇಳಿದ್ದಾರೆ.
ಇದಕ್ಕೆ ಉತ್ತರಿಸಿದ ಹೆಚ್.ಡಿ.ಕುಮಾರಸ್ವಾಮಿ ನಾನು ಬ್ರಾಹ್ಮಣ ವಿರೋಧಿ ಹೇಳಿಕೆ ನೀಡಿಲ್ಲ. ನಾನು ಮುಖ್ಯಮಂತ್ರಿಯಾಗಿದ್ದಾಗ ಬ್ರಾಹ್ಮಣ ಸಮುದಾಯ ಭವನಕ್ಕೆ ಜಾಗ ಕೊಟ್ಟಿದ್ದೇನೆ. ಬ್ರಾಹ್ಮಣ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ್ದು ನಾನು. ಸರ್ವೇ ಜನಾಃ ಸುಖಿನೋ ಭವಂತು ಎನ್ನುವ ಬ್ರಾಹ್ಮಣರು ನಮಗೆ ಬೇಕು. ರಾಮಕೃಷ್ಣ ಹೆಗಡೆ ಅವರನ್ನ ಸಿಎಂ ಮಾಡಿದ್ದು ದೇವೆಗೌಡರು ಎಂದು ಸ್ಪಷ್ಟನೆ ನೀಡಿದರು. ಕುಮಾರಸ್ವಾಮಿ ಇಂದು ಗೋಕರ್ಣ ಶ್ರೀ ಮಹಾಬಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆತ್ಮಲಿಂಗ ಸ್ಪರ್ಷಿಸಿ ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಹಿಂದೂ ಧರ್ಮವನ್ನು ನಾವು ರಕ್ಷಣೆ ಮಾಡುತ್ತೇವೆ. ಹಿಂದೂ ಹೆಸರಲ್ಲಿ ಅಧಿಕಾರಕ್ಕೆ ಬಂದು ಏನು ಮಾಡಿದ್ದಾರೆ ಗೊತ್ತಿದೆ. ಬ್ರಾಹ್ಮಣ ಸಮುದಾಯಕ್ಕೆ ಬಿಜೆಪಿ ಏನು ಮಾಡಿದೆ ಹೇಳಿ ? ಎಂದು ಪ್ರಶ್ನೆ ಮಾಡಿದರು.
ನಳಿನ್ ಕುಮಾರ್ ಕಟೀಲ್ ಗೆ ರಾಜಕೀಯ ಬಗ್ಗೆ ಏನು ಗೊತ್ತಿದೆ. ಕಟೀಲು ಅನ್ನುವ ಹೆಸರು ಬದಲು ಪಿಟೀಲು ಅಂತ ಇಟ್ಟುಕೊಳ್ಳಲಿ. ನಮಗೆ ಸಾವರ್ಕರ್ ಸಂಸ್ಕೃತಿ ಬೇಡ. ನಾವು ಎಷ್ಟು ಸ್ಥಾನ ಗೆಲ್ಲುತ್ತೇವೆ ಅನ್ನೋದನ್ನು ಜನ ನಿರ್ಧರಿಸುತ್ತಾರೆ. ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ : –HDK- ನಾನು ಜಾತಿ ರಾಜಕಾರಣ ಮಾಡಿಲ್ಲ! ವಿವಾದಾತ್ಮಕ ಹೇಳಿಕೆಗೆ HDK ಸ್ಪಷ್ಟನೆ