ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ (KGF-2) ಸಿನಿಮಾ ವಿಶ್ವಾದ್ಯಂತ ಇಂದು ತೆರೆಗೆಬಂದಿದೆ. ಬೆಂಗಳೂರಿನಲ್ಲಿ ಮಧ್ಯರಾತ್ರಿಯೇ 5 ಕಡೆಗಳಲ್ಲಿ ಫಸ್ಟ್ ಶೋ ಆರಂಭವಾಗಿದ್ದು, ರಾಜ್ಯದ 550ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ತೆರೆಕಂಡಿದೆ.
ಭಾರತದಾದ್ಯಂತ 6 ಸಾವಿರಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಕೆಜಿಎಫ್-2 ಪ್ರದರ್ಶನವಾಗುತ್ತಿದೆ. ಇಡೀ ವಿಶ್ವದ ಚಿತ್ರರಂಗ ತಿರುಗಿ ನೋಡುತ್ತಿರುವ ರೀತಿಯಲ್ಲಿ ಕನ್ನಡಿಗರು ತೆರೆಗೆ ತಂದಿರುವ ಚಿತ್ರಕ್ಕೆ ಬಿಡುಗಡೆಯಾದ ಎಲ್ಲಾ ಭಾಷೆಗಳಲ್ಲಿಯೂ ಭರ್ಜರಿ ಓಪನಿಂಗ್ ಸಿಕ್ಕಿರುವುದು ವಿಶೇಷ. ಕನ್ನಡ ಮಾತ್ರವಲ್ಲದೆ ಹಿಂದಿ, ತೆಲುಗು, ತಮಿಳು, ಮಲಯಾಳಂಗಳಲ್ಲಿ ಸಹ ಚಿತ್ರಕ್ಕೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಇದನ್ನು ಓದಿ : – ಗ್ರೀಸ್ ನಲ್ಲಿ ಚಿತ್ರ ಬಿಡುಗಡೆ ಮಾಡಿ ದಾಖಲೆ ಬರೆಯಲಿರುವ ಕೆಜಿಎಫ್ – 2
ಇಂದು ಬೆಳಗ್ಗೆ ಮೊದ ಶೋ ನೋಡಿ ಬಂದವರು ರಾಕಿಬಾಯ್ ಯನ್ನು ಹೊಗಳುತ್ತಿದ್ದಾರೆ. ಅನೇಕ ಮಹಿಳಾ ಅಭಿಮಾನಿಗಳು, ಮಕ್ಕಳು ಫಿದಾ ಆಗಿರುವುದು ವಿಶೇಷ. 5 ಭಾಷೆಗಳಲ್ಲಿ 70 ದೇಶಗಳಲ್ಲಿ ಕೆಜಿಎಫ್-2 ಬಿಡುಗಡೆಯಾಗಿದೆ. ಉತ್ತರ ಭಾರತದಲ್ಲಿ ಕೂಡ ಕೆಜಿಎಫ್-2 ಹವಾ ಆರಂಭವಾಗಿದೆ. ಕರ್ನಾಟಕದಲ್ಲಿ ಎಲ್ಲಾ ಥಿಯೇಟರ್ ಗಳಲ್ಲಿ ಟಿಕೆಟ್ ಸೋಲ್ಡ್ ಔಟ್ ಆಗಿದೆ.
ಇದನ್ನು ಓದಿ : – ಧರ್ಮಸ್ಥಳಕ್ಕೆ ರಾಕಿಂಗ್ ಸ್ಟಾರ್ ಯಶ್ ಭೇಟಿ