ಬೆಳಗಾವಿ ಜಿಲ್ಲೆ ಬಿಜೆಪಿಯಲ್ಲಿ ಭಿನ್ನಮತದ ಹೊಗೆಯಾಡುತ್ತಿದೆ. ಖಾಸಗಿ ಹೋಟೆಲ್ ನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಜಾರಕಿಹೊಳಿ ಬ್ರದರ್ಸ್, ಕತ್ತಿ ಸವದಿ ಬಣದ ಮಧ್ಯೆ ಭಿನ್ನಮತ ಬಹಿರಂಗವಾಗಿದೆ.
ಅಕ್ಕ ಪಕ್ಕ ಕುಳಿತಿದ್ರು ಯಾವ ನಾಯಕರ ಮಧ್ಯೆ ಮಾತಿಲ್ಲ ಕಥೆಯಿಲ್ಲ. ಪರಸ್ಪರ ಮುಖ ನೋಡಿಲ್ಲ. ಸಭೆ ಬಳಿಕ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿ ಎಲ್ಲಾ ವಿಷಯಗಳ ಬಗ್ಗೆ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚರ್ಚೆ ಆಗಿದೆ. ಜಿಲ್ಲೆಯಲ್ಲಿ ಇದ್ದ ಭಿನ್ನಾಭಿಪ್ರಾಯ ಎಲ್ಲಾ ಮುಗಿದಿದೆ. ಕೆಲ ವಿಚಾರ ಬಹಿರಂಗವಾಗಿ ಹೇಳಲು ಆಗಲ್ಲ. ಎಲ್ಲರೂ ಕೂಡಿ ಪ್ರಮಾಣಿಕವಾಗಿ ಕೆಲಸ ಮಾಡುತ್ತೇವೆ. ಪದವೀಧರ, ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಗೆಲ್ಲಿಸಲು ಕೆಲಸ ಮಾಡುತ್ತೇವೆ. ಈ ಚುನಾವಣೆಯಲ್ಲಿ ಬಿಜೆಪಿ ಸೋಲಿಸುವ ಪ್ರಶ್ನೆಯೆ ಇಲ್ಲ ಎಂದು ಹೇಳಿದ್ದಾರೆ. ಚುನಾವಣೆ ಮುಗಿದ ಬಳಿಕ ರಮೇಶ್ ಜಾರಕಿಹೊಳಿಗೆ ಒಳ್ಳೆಯದಾಗುತ್ತದೆ. ಜಾರಕಿಹೊಳಿ ಸಹೋದರರನ್ನು ಕಡೆಗಣಿಸಿಲ್ಲ. ಲಖನ್ ಜಾರಕಿಹೊಳಿ ಬಿಜೆಪಿ ಅಭ್ಯರ್ಥಿಗೆ ಬೆಂಬಲಿಸುವುದಾಗಿ ಹೇಳಿದ್ದಾರೆ ಎಂದು ತಿಳಿಸಿದ್ರು. ಇದನ್ನೂ ಓದಿ :- ಕಾಂಗ್ರೆಸ್ ನಲ್ಲಿ ಯೌವನ ನಿರ್ಧಾರವಾಗುವುದು 50ರ ನಂತರವೇ? – ಕೈ ಕಾಲೆಳೆದು ಬಿಜೆಪಿ ಟ್ವೀಟ್
ಬಿಜೆಪಿಗೆ ಗೆಲುವು ಎಂದ ಜೋಷಿ
ವಾಯುವ್ಯ ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎರಡು ಕ್ಷೇತ್ರದಲ್ಲಿ ಬಿಜೆಪಿ ದೊಡ್ಡ ಅಂತರದ ಗೆಲವು ಸಾಧಿಸಲಿದೆ ಎಂದು ಬೆಳಗಾವಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ರು. ಪ್ರತಿ ಶಾಸಕರಿಗೆ ಹೆಚ್ಚಿನ ಲೀಡ್ ಕೊಡಿಸುವ ಜವಾಬ್ದಾರಿ ನೀಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿಯಲ್ಲಿ ಭಿನ್ನಮತ ವಿಚಾರ ಕುರಿತಂತೆ ಪ್ರತಿಕ್ರಿಯಿಸಿ ಭಿನ್ನಮತವೇ ಇಲ್ಲ, ಎಲ್ಲಾ ಒಂದೇ ಮತ.
ಯಾರಿಗೆ ಏನ್ ಸೂಚನೆ ಕೊಡಬೇಕು ಕೊಟ್ಟಿದ್ದೇನೆ. ನಾನು ಭಿನ್ನಮತ ಶಮನಕ್ಕೆ ಬಂದಿಲ್ಲ ಎಂದು ಹೇಳಿದ್ರು. ಇದೇ ವೇಳೆ ಸಂಪುಟ ವಿಸ್ತರಣೆ ವಿಚಾರ ಕುರಿತಂತೆ ಪ್ರತಿಕ್ರಿಯಿಸಿ ಮುಖ್ಯಮಂತ್ರಿಗಳು ಕೇಂದ್ರ ನಾಯಕರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದು ಹೇಳಿದ್ರು.
ಇದನ್ನೂ ಓದಿ :- ಪ್ರಧಾನಿಯಾಗಿ ಮೋದಿಗೆ ಮೊದಲ ಸ್ಥಾನ..ರಾಹುಲ್ ಗಾಂಧಿ ಎಷ್ಟನೇ ಸ್ಥಾನ ಗೊತ್ತಾ..?