ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ (UDDAV THACKREY) ಕುರ್ಚಿ ಅಲುಗಾಡುತ್ತಿದ್ದು, ಪಕ್ಷದ ಕೆಲ ಶಾಸಕರೊಂದಿಗೆ ನಾಪತ್ತೆಯಾಗಿರೋ ಶಿವಸೇನೆ ಸಚಿವ ಏಕನಾಥ್ ಶಿಂಧೆ(EKNATH SINDHE) ಅವರಿಗೆ ಪಕ್ಷ ವಜಾ ಶಿಕ್ಷೆ ನೀಡಿದೆ. ಏಕನಾಥ್ ಶಿಂಧೆ ಇತರ 21 ಶಾಸಕರೊಂದಿಗೆ ಗುಜರಾತ್ನ ಸೂರತ್ ಹೋಟೆಲ್ಗೆ ತೆರಳಿದ್ದರು. ಇದೀಗ ಶಿವಸೇನೆ ಪಕ್ಷದ ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಮತ್ತು ಮುಖ್ಯ ಸಚೇತಕ ಸ್ಥಾನದಿಂದ ಶಿಂಧೆ ಅವರನ್ನು ವಜಾಗೊಳಿಸಿದೆ.
ಶಾಸಕಾಂಗ ಪಕ್ಷದ ನಾಯಕರಾಗಿದ್ದ ಏಕನಾಥ್ ಶಿಂಧೆ ಅವರ ಸ್ಥಾನಕ್ಕೆ ಶಿವಸೇನೆಯ ಸೆವ್ರಿ ಶಾಸಕ ಅಜಯ್ ಚೌಧರಿ ಅವರನ್ನು ನೂತನವಾಗಿ ನೇಮಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಏಕನಾಥ್ ಶಿಂಧೆ ಟ್ವೀಟ್ ಮಾಡಿ ತಾವು ಅಧಿಕಾರಕ್ಕಾಗಿ ಎಂದಿಗೂ ಮೋಸ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಬಾಳಾಸಾಹೇಬರು ನಮಗೆ ಹಿಂದುತ್ವವನ್ನು ಕಲಿಸಿದ್ದಾರೆ. ಬಾಳಾಸಾಹೇಬರ ಚಿಂತನೆಗಳು ಮತ್ತು ಧರ್ಮವೀರ್ ಆನಂದ್ ದಿಘೆ ಸಾಹೇಬ್ ಅವರ ಬೋಧನೆಗಳಿಗೆ ಸಂಬಂಧಿಸಿದಂತೆ ನಾವು ಎಂದಿಗೂ ಅಧಿಕಾರಕ್ಕಾಗಿ ಮೋಸ ಮಾಡಿಲ್ಲ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ : – ಹೆಚ್ಚಿದ ಅತ್ಯಾಚಾರ ಪ್ರಕರಣ – ಪಂಜಾಬ್ ಪ್ರಾಂತ್ಯದಲ್ಲಿ ತುರ್ತು ಪರಿಸ್ಥಿತಿ ಘೋಷಣೆ..!
ಈಗಿನ ಬಿಕ್ಕಟ್ಟಿನ ನಡುವೆ ಮಹಾರಾಷ್ಟ್ರದಲ್ಲಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ನಿಗಾವಹಿಸಲು ಕಮಲ್ ನಾಥ್ ಅವರನ್ನು ಪಕ್ಷದ ವೀಕ್ಷಕರನ್ನಾಗಿ ಕಾಂಗ್ರೆಸ್ ನೇಮಕ ಮಾಡಿದೆ. ಮಹಾರಾಷ್ಟ್ರದಲ್ಲಿನ ಮೈತ್ರಿ ಸರ್ಕಾರ ಇನ್ನೂ 2.5 ವರ್ಷಗಳ ಅವಧಿ ಹೊಂದಿದ್ದು, ಅದನ್ನು ಪೂರ್ಣಗೊಳಿಸಲಿದೆ ಎಂದಿರುವ ಶಿವಸೇನಾ ಸಂಸದ ಸಂಜಯ್ ರಾವತ್, ಶಿವಸೇನಾ ಶಾಸಕರು ಮಾತುಕತೆಗಾಗಿ ಮುಂಬಯಿಗೆ ಬರಬಹುದು ಎಂದು ಆಹ್ವಾನ ನೀಡಿದ್ದಾರೆ.
ಇದನ್ನೂ ಓದಿ : – ಅಗ್ನಿಪಥ್ ಯೋಜನೆ ಯುವಕರಿಗೆ ಮಾಡಿದ ಅವಮಾನ – ಅಖಿಲೇಶ್ ಯಾದವ್