ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅಧಿಕಾರ ಸ್ವೀಕರಿಸಿದ್ದಾರೆ. ಕಳೆದ ವಾರವಷ್ಟೇ ನಡೆದ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ 66 ವರ್ಷದ ಶಶಿ ತರೂರ್ ಅವರನ್ನು ಸೋಲಿಸಿದ ಕರ್ನಾಟಕದ ಹಿರಿಯ ನಾಯಕ 80 ವರ್ಷದ ಮಲ್ಲಿಕಾರ್ಜುನ ಖರ್ಗೆ ಇಂದು ದೆಹಲಿಯಲ್ಲಿ ಸೋನಿಯಾ ಗಾಂಧಿ ಅವರಿಂದ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಈ ವೇಳೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಕಾರ್ಮಿಕನ ಮಗನನ್ನು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಏರಿಸಿದೆ. ಇದು ನನಗೆ ಅತ್ಯಂತ ಭಾವುಕ ಕ್ಷಣ ಎಂದಿದ್ದಾರೆ.
ಇದನ್ನೂ ಓದಿ : – CANCER – ಕರುಳಿನ ಕ್ಯಾನ್ಸರ್ – ಉದ್ಯಮಿ ಕಿರಣ್ ಮಜುಮ್ದಾರ್ ಶಾ ಪತಿ ಜಾನ್ ಶಾ ನಿಧನ
ಕಳೆದ 24 ವರ್ಷಗಳಲ್ಲಿ ಗಾಂಧಿಯೇತರ ಮೊದಲ ಕಾಂಗ್ರೆಸ್ ( congress )ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಈ ಸಮಾರಂಭದಲ್ಲಿ ಕೆಸಿ ವೇಣುಗೋಪಾಲ್, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತಿತರ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು. ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋನಿಯಾ ಗಾಂಧಿ ಅಭಿನಂದಿಸಿದರು.
ಈ ವೇಳೆ ಮಾತನಾಡಿದ ಸೋನಿಯಾ ಗಾಂಧಿ, “ಹೊಸದಾಗಿ ಆಯ್ಕೆಯಾದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಾನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ” ಎಂದು ಹೇಳಿದ್ರು.
ಇದನ್ನೂ ಓದಿ – ಬಿಂಡಿಗ ದೇವಿರಮ್ಮ ದರ್ಶನ ಪಡೆಯಲು ಹರಿದು ಬಂದ ಜನಸಾಗರ…!