ಬೃಹತ್ ಐಟಿ ದಾಳಿ – 32 ಕೆಜಿ ಚಿನ್ನ, 56 ಕೋಟಿ ಕ್ಯಾಶ್, 16 ಕೋಟಿ ಮೌಲ್ಯದ ವಜ್ರ ಸೇರಿ 390 ಕೋಟಿ ಅಕ್ರಮ ಆಸ್ತಿ ಪತ್ತೆ

ಮಹಾರಾಷ್ಟ್ರ( maharastra ) ದ ಜಲ್ನಾ ದಲ್ಲಿ ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಹಲವೆಡೆ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಸುಮಾರು 390 ಕೋಟಿ ರೂಗಳಷ್ಟು “ಬೇನಾಮಿ” ಆಸ್ತಿ ಅಥವಾ “ಲೆಕ್ಕ ರಹಿತ” ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ವಶಪಡಿಸಿಕೊಂಡ ಸ್ವತ್ತುಗಳಲ್ಲಿ 56 ಕೋಟಿ ರೂ ನಗದು ಮತ್ತು 14 ಕೋಟಿ ರೂ ಮೌಲ್ಯದ 32 ಕೆಜಿ ಚಿನ್ನ, ಮುತ್ತುಗಳು ಮತ್ತು ವಜ್ರಗಳು ಸೇರಿವೆ. ದಾಳಿಯ ವೇಳೆ ಅಧಿಕಾರಿಗಳು ಕೆಲವು ಆಸ್ತಿ ದಾಖಲೆಗಳು ಮತ್ತು ಡಿಜಿಟಲ್ ಡೇಟಾವನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ : – ಕೊಡಗಿನಲ್ಲಿ ಮಳೆ ನಿಂತರು ನಿಲ್ಲದ ಅನಾಹುತ- ಗುಡ್ಡ ಕುಸಿದು 250ಕ್ಕೂ ಹೆಚ್ಚು ಮನೆಗಳಿಗೆ ಹಾನಿ!

ಉಕ್ಕು,ಬಟ್ಟೆ ಮತ್ತು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಎರಡು ವ್ಯಾಪಾರ ಗುಂಪುಗಳಿಗೆ ಸಂಬಂಧಿಸಿದ ವಸತಿ ಮತ್ತು ಅಧಿಕೃತ ಆವರಣದಲ್ಲಿ ಆಗಸ್ಟ್ 1 ಮತ್ತು 8 ರ ನಡುವೆ ದಾಳಿಗಳನ್ನು ನಡೆಸಲಾಗಿತ್ತು. ಇದೀಗ ಈ ದಾಳಿಯಲ್ಲಿ ವಶಕ್ಕೆ ಪಡೆಯಲಾದ ಸ್ವತ್ತುಗಳ ದತ್ತಾಂಶವನ್ನು ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ಆದಾಯ ತೆರಿಗೆ ಇಲಾಖೆಯು ಶೋಧ ಕಾರ್ಯಾಚರಣೆಗಾಗಿ ರಾಜ್ಯದಾದ್ಯಂತ 260 ಅಧಿಕಾರಿಗಳನ್ನು ಒಳಗೊಂಡ ಐದು ತಂಡಗಳನ್ನು ರಚಿಸಿತ್ತು. ಕಾರ್ಯಾಚರಣೆಯಲ್ಲಿ 120 ಕ್ಕೂ ಹೆಚ್ಚು ವಾಹನಗಳನ್ನು ಬಳಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : – ಮಾಟ-ಮಂತ್ರದಂತಹ ಮೂಢನಂಬಿಕೆಗಳ ಬಗ್ಗೆ ಮಾತನಾಡಿ ಪ್ರಧಾನಿ ಹುದ್ದೆಯ ಗೌರವ ಕಳೆಯಬೇಡಿ – ರಾಹುಲ್ ಗಾಂಧಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!